1ರ ಬದಲಾಗಿ 5 ಮತಗಟ್ಟೆಯ ವಿವಿಪ್ಯಾಟ್, ಇವಿಎಂ ತಾಳೆ ಮಾಡಿ – ಸುಪ್ರೀಂ

Public TV
1 Min Read
COURT EVM

ನವದೆಹಲಿ: 2019ರ ಸಾರ್ವತ್ರಿಕ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಂತೆಯೇ ಸುಪ್ರೀಂ ಕೋರ್ಟ್ ಇವಿಎಂ ವಿಚಾರವಾಗಿ ಮಹತ್ವದ ಆದೇಶವನ್ನು ನೀಡಿದ್ದು, ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯ ಬದಲಾಗಿ 5 ಮತಗಟ್ಟೆಯ ವಿವಿ ಪ್ಯಾಟ್ ಹಾಗೂ ಇವಿಎಂ ಯಂತ್ರಗಳಲ್ಲಿ ಚಲಾವಣೆಯಾದ ಮತಗಳನ್ನು ತಾಳೆ ಮಾಡಬೇಕು ಎಂದು ಆದೇಶಿಸಿದೆ.

ಇವಿಎಂ ಕುರಿತು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ, ನ್ಯಾ. ದೀಪಕ್ ಗುಪ್ತಾ ಹಾಗೂ ನ್ಯಾ. ಸಂಜೀವ್ ಖನ್ನಾ ಅವರ ತ್ರಿಸದಸ್ಯ ಪೀಠ ಈ ಆದೇಶವನ್ನು ಪ್ರಕಟಿಸಿದೆ.

VVPAT

ಇಲ್ಲಿಯವರೆಗೆ ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಲ್ಲಿ ಚಲಾವಣೆಯಾದ ಇವಿಎಂ ಮತಗಳನ್ನು ವಿವಿಪ್ಯಾಟ್ ನಲ್ಲಿ ಬಿದ್ದ ಮತಗಳ ಜೊತೆ ತಾಳೆ ಮಾಡಲಾಗುತಿತ್ತು. ಆದರೇ ಈಗ ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯ ಬದಲಾಗಿ 5 ಮತಗಟ್ಟೆಯ ಪರಿಶೀಲಿಸಬೇಕೆಂದು ಆದೇಶ ಪ್ರಕಟವಾಗಿದೆ.

ಅರ್ಜಿಯ ಕುರಿತು ಚುನಾವಣಾ ಆಯೋಗದೊಂದಿಗೆ ಮಾಹಿತಿ ಪಡೆಯಲಾಗಿದ್ದು, ನಮಗೆ ಇವಿಎಂ ಗಳು ನೀಡುವ ಫಲಿತಾಂಶದ ಬಗ್ಗೆ ಯಾವುದೇ ಸಂದೇಹ ಇಲ್ಲ. ಆದರೆ ಪರಿಶೀಲನೆಯ ಸಂಖ್ಯೆಗಳನ್ನು ಹೆಚ್ಚಿಸುವ ನಿರ್ಧಾರ ಮಾಡಲಾಗಿದೆ ಎಂದು ಪೀಠ ತಿಳಿಸಿದೆ.

leaders

ಇವಿಎಂ ಬಳಕೆಯ ಕುರಿತು ಸುಪ್ರೀಂ ಕೋರ್ಟಿಗೆ ದೇಶದ 21 ರಾಜಕೀಯ ಪಕ್ಷಗಳು ಅರ್ಜಿ ಸಲ್ಲಿಸಿದ್ದವು. ಈ ವೇಳೆ ಪ್ರತಿ ಚುನಾವಣಾ ಕ್ಷೇತ್ರದ ಶೇ.50 ರಷ್ಟು ಇವಿಎಂ ಗಳನ್ನು ವಿವಿಪ್ಯಾಟ್ ನೊಂದಿಗೆ ಹೋಲಿಕೆ ಮಾಡಿ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿತ್ತು. ಈ ಮನವಿ ಆಯೋಗ ಶೇ.50 ರಷ್ಟು ಮತ ಎಣಿಕೆ ನಡೆಸಿದರೆ ಫಲಿತಾಂಶ ಪ್ರಕಟಿಸಲು 5-6 ದಿನ ಬೇಕಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿತ್ತು.

Share This Article
Leave a Comment

Leave a Reply

Your email address will not be published. Required fields are marked *