ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಜನವರಿ 25ಕ್ಕೆ ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸುವುದಾಗಿ ನ್ಯಾ.ಎ.ಎಂ ಖಾನ್ವಿಲ್ಕರ್ ನೇತೃತ್ವದ ದ್ವಿ ಸದಸ್ಯ ಪೀಠ ಹೇಳಿದೆ.
ಮೇಕೆದಾಟು ಆಣೆಕಟ್ಟು ನಿರ್ಮಾಣ ವಿಚಾರವಾಗಿ ದೆಹಲಿಯ ರಾಷ್ಟ್ರೀಯ ಹಸಿರು ನ್ಯಾಯಧೀಕರಣ ನೀಡಿದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಕೋರ್ಟ್ ಮೂಲ ಅರ್ಜಿಯೊಂದಿಗೆ ವಿಚಾರಣೆ ನಡೆಸುವುದಾಗಿ ಹೇಳಿದೆ.
Advertisement
Advertisement
ಮೇಕೆದಾಟು ಅಣೆಕಟ್ಟು ನಿರ್ಮಾಣ ಪ್ರದೇಶದಲ್ಲಿ ಈಗಾಗಲೇ ಕಾಮಗಾರಿ ಆರಂಭವಾಗಿದೆ. ಇದು ಪರಿಸರದ ಮೇಲೆ ಪರಿಣಾಮ ಬೀರಲಿದೆ ಎಂದು ತಮಿಳುನಾಡು ಮಾಧ್ಯಮಗಳು ವರದಿ ಮಾಡಿದ್ದವು. ವರದಿ ಆಧರಿಸಿ ಚೆನೈನಲ್ಲಿರುವ ದಕ್ಷಿಣ ಹಸಿರು ನ್ಯಾಯಧೀಕರಣ ಸ್ವಯಂ ದೂರು ದಾಖಲಿಸಿಕೊಂಡಿತ್ತು.
Advertisement
Advertisement
ತಮಿಳುನಾಡು ಸರ್ಕಾರ ಸಲ್ಲಿಸಿದ ಮಾಹಿತಿಯೊಂದಿಗೆ ವಿಚಾರಣೆ ನಡೆಸಿದ ಕೋರ್ಟ್ ಸ್ಥಳ ಪರಿಶೀಲನೆಗಾಗಿ ಸಮಿತಿಯೊಂದನ್ನು ರಚನೆ ಮಾಡಿತ್ತು. ಆದರೆ ಕರ್ನಾಟಕದ ಅಭಿಪ್ರಾಯ ಕೇಳದೆ ರಚಿಸಿದ್ದ ಸಮಿತಿಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿ ದೆಹಲಿಯ ಹಸಿರು ನ್ಯಾಯಧೀಕರಣಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇದನ್ನೂ ಓದಿ: ರಾಮನಗರ ಶಾಂತಿಯ ಜಿಲ್ಲೆ, ಗೂಂಡಾ ರೀತಿಯ ವರ್ತನೆ ಮಾಡಿದ್ದು ತಪ್ಪು: ಎಚ್‍ಡಿಕೆ ಕಿಡಿ
ಈ ಅರ್ಜಿ ವಿಚಾರಣೆ ನಡೆಸಿದ ರಾಷ್ಟ್ರೀಯ ಹಸಿರು ಪೀಠ ಚೆನೈ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲಾಗಿತ್ತು. ಇನ್ನು ಯೋಜನೆಯನ್ನು ವಿರೋಧಿಸಿ ತಮಿಳುನಾಡು ಈಗಾಗಲೇ ಒಂದು ಪ್ರತ್ಯೇಕ ಅರ್ಜಿ ಸಲ್ಲಿಸಿರುವ ಹಿನ್ನೆಲೆ ಎರಡು ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.