ನವದೆಹಲಿ: ಉತ್ತರ ಪ್ರದೇಶದಲ್ಲಿ ಮದರಸಾಗಳಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ತಡೆ ನೀಡಿದೆ. ಇದರಿಂದ ರಾಜ್ಯದ ಸುಮಾರು 17 ಲಕ್ಷ ಮದರಸಾ (UP Madrassas) ವಿದ್ಯಾರ್ಥಿಗಳಿಗೆ ರಿಲೀಫ್ ಸಿಕ್ಕಿದೆ.
ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ 2004 ಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ (Allahabad High Court) ತೀರ್ಪು ನೀಡಿತ್ತು. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಹೈಕೋರ್ಟ್ ತೀರ್ಪು ಪ್ರಾಥಮಿಕವಾಗಿ ಸರಿಯಾಗಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಹೇಮಂತ್ ಸೊರೇನ್‌ಗೆ ಸೇರಿದ್ದ 31 ಕೋಟಿ ರೂ. ಮೌಲ್ಯದ ಆಸ್ತಿ, ಬಿಎಂಡಬ್ಲ್ಯೂ ಕಾರು ಇಡಿ ವಶ
Advertisement
Advertisement
ಮದರಸಾ ಮಂಡಳಿಯ ಗುರಿಗಳು ಮತ್ತು ಉದ್ದೇಶಗಳು ನಿಯಂತ್ರಕ ಸ್ವರೂಪದ್ದಾಗಿದ್ದು, ಮಂಡಳಿಯ ಸ್ಥಾಪನೆಯು ಜಾತ್ಯತೀತತೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.
Advertisement
ಹೈಕೋರ್ಟ್ ಮದರಸಾ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ನಿರ್ದೇಶನ ನೀಡಿದೆ. ಇದು 17 ಲಕ್ಷ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಇತರ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ನಿರ್ದೇಶನವನ್ನು ಸಮರ್ಥಿಸಲಾಗಿಲ್ಲ ಎಂದು ಸುಪ್ರೀಂ ಹೇಳಿದೆ. ಇದನ್ನೂ ಓದಿ: ಸಲೂನ್‌ನಲ್ಲಿ ಜನರಿಗೆ ಕ್ಷೌರ ಮಾಡಿ ಮತಯಾಚನೆ- ಗಮನ ಸೆಳೆದ ಅಭ್ಯರ್ಥಿಯ ಚುನಾವಣಾ ಪ್ರಚಾರ
Advertisement
ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2004 ಅಸಾಂವಿಧಾನಿಕವಾದುದು. ಇದು ಜಾತ್ಯತೀತ ತತ್ವಗಳನ್ನು ಉಲ್ಲಂಘಿಸಿದೆ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು.
ರಾಜ್ಯದ ಮದರಸಾಗಳಲ್ಲಿರುವ ವಿದ್ಯಾರ್ಥಿಗಳನ್ನು ಸಾಮಾನ್ಯ ವ್ಯವಸ್ಥೆಯ ಶಾಲೆಗಳಿಗೆ ದಾಖಲುಪಡಿಸಬೇಕು ಎಂದು ಸಹ ರಾಜ್ಯ ಸರ್ಕಾರಕ್ಕೆ ಕೋರ್ಟ್ ನಿರ್ದೇಶಿಸಿತ್ತು.