ನವದೆಹಲಿ : 2002ರ ಗುಜರಾತ್ ಗಲಭೆಯಲ್ಲಿ (Gujarat Riots) ಸಂಭವಿಸಿದ ಬಿಲ್ಕಿಸ್ ಬಾನೋ (Bilkis Bano) ಸಾಮೂಹಿಕ ಅತ್ಯಾಚಾರ (Gang Rape) ಪ್ರಕರಣದಲ್ಲಿ ಭಾಗಿಯಾಗಿದ್ದ ಅಪರಾಧಿಗಳ ಅವಧಿಗೆ ಮುನ್ನ ಬಿಡುಗಡೆಗೆ ಅವಕಾಶ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ (Supreme Court) ರದ್ದುಗೊಳಿಸಿದೆ.
ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 11 ಜನರನ್ನು ಅಕಾಲಿಕವಾಗಿ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಬಳಿಕ ಈ ತೀರ್ಪು ನೀಡಲಾಗಿದೆ. ಇದನ್ನೂ ಓದಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ – ದಾಖಲೆ ಜಯದೊಂದಿಗೆ ಸತತ 5ನೇ ಬಾರಿಗೆ ಮರು ಆಯ್ಕೆ
Advertisement
Advertisement
ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಹನ್ನೊಂದು ಅಪರಾಧಿಗಳು ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಮತ್ತು ಜೈಲಿನಲ್ಲಿಯೇ ಮುಂದುವರಿಯಬೇಕು ಎಂದು ಹೇಳಿದೆ. ಇದೇ ವೇಳೆ 2022 ಆಗಸ್ಟ್ ನಲ್ಲಿ ದೋಷಿಗಳ ಬಿಡುಗಡೆಗೆ ನಿರ್ಧಾರ ಕೈಗೊಂಡ ಪ್ರಕ್ರಿಯೆಗಳನ್ನು ಒಳಗೊಂಡ ಮೂಲ ಕಡತಗಳನ್ನು ಸಲ್ಲಿಸುವಂತೆ ನ್ಯಾಯಾಲಯ ಕೇಂದ್ರ ಸರಕಾರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಇದನ್ನೂ ಓದಿ: ಮಾಲೂರು ಶಾಸಕ ನಂಜೇಗೌಡ ಮನೆ ಮೇಲೆ ಇಡಿ ದಾಳಿ
Advertisement
ಗುಜುರಾತ್ ಗಲಭೆಯ ಸಮಯದಲ್ಲಿ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಅಪರಾಧಿಗಳು ಹತ್ಯೆ ಮಾಡಿದ್ದರು. ಪ್ರಕರಣದ ಆರೋಪಿಗಳಾದ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧ್ಯೇಶಮ್ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೊಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯ್ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್ ಚಂದನಾ ಅವರನ್ನು ಜೀವಾವಧಿ ಶಿಕ್ಷೆಯ ಅವಧಿಗೂ ಮುನ್ನವೇ ರಾಜ್ಯ ಸರ್ಕಾರವು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೊಳಿಸಿತ್ತು.
Advertisement