ನಟಿ ಕಂಗನಾ ರಣಾವತ್‌ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಸೆನ್ಸಾರ್‌ಗೆ ಸುಪ್ರೀಂ ನಕಾರ

Public TV
1 Min Read
KANGANA 1

ನವದೆಹಲಿ: ವಿವಾದಿತ ಹೇಳಿಕೆಗಳ ಮೂಲಕ ಸದಾ ಸುದ್ದಿಯಾಗುವ ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರ ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳನ್ನು ಸೆನ್ಸಾರ್‌ ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಕಂಗನಾ ವಿವಾದಿತ ಹೇಳಿಕೆಗಳ ಪೋಸ್ಟ್‌ಗಳು ಹಾಗೂ ಅವರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ಆಧರಿಸಿ ಕ್ರಮಕೈಗೊಳ್ಳುವಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಮತ್ತು ಬೇಲಾ ತ್ರಿವೇದಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಇದನ್ನೂ ಓದಿ: ತಂದೆ-ತಾಯಿಯಾದ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್!

supreme court 12

ಸಿಖ್‌ ರೈತರನ್ನು ಖಲಿಸ್ತಾನ ಉಗ್ರರಿಗೆ ಹೋಲಿಸಿ ಕಾಮೆಂಟ್‌ ಮಾಡಿದ್ದಾರೆ. ಇಂತಹ ಅನೇಕ ವಿವಾದಿತ ಹೇಳಿಕೆಗಳನ್ನು ಅವರು ನೀಡಿದ್ದಾರೆ. ಈ ರೀತಿಯ ಹೇಳಿಕೆಗಳು ಜನಾಂಗೀಯ ತಾರತಮ್ಯ, ಗಲಭೆಗಳಿಗೆ ಕಾರಣವಾಗಬಹುದು. ಇವರ ಹೇಳಿಕೆಗಳು ಅಪರಾಧದ ಅಂಶಗಳನ್ನು ಒಳಗೊಂಡಿವೆ ಎಂದು ಅರ್ಜಿದಾರರು ದೂರಿದ್ದರು.

ರಣಾವತ್‌ ಅವರ ಪೋಸ್ಟ್‌ಗಳನ್ನು ಓದದಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಿದೆ. ಅವರ ಹೇಳಿಕೆಗಳನ್ನು ನೀವು ಹೆಚ್ಚು ಪ್ರಚಾರ ಮಾಡಿ ಅವರ ಉದ್ದೇಶಗಳಿಗೆ ಸೇವೆ ಸಲ್ಲಿಸುತ್ತಿದ್ದೀರಿ. ಆ ಮೂಲಕ ನಿಮ್ಮ ಸ್ವಂತ ಅಭಿಪ್ರಾಯಗಳಿಗೆ ಅಪಚಾರ ಮಾಡುತ್ತಿದ್ದೀರಿ ಎಂದು ನ್ಯಾಯಮೂರ್ತಿ ಚಂದ್ರಚೂಡ್‌ ತಿಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್‌ನಲ್ಲೇ ದುಬಾರಿ ಆಟಗಾರನಾಗಿ ಹೊರಹೊಮ್ಮಿದ ರಾಹುಲ್‌ಗೆ ಕ್ಯಾಪ್ಟನ್‌ ಪಟ್ಟ ಕಟ್ಟಿದ ಲಕ್ನೋ

kangana ranaut

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ, ಖಲಿಸ್ತಾನ ಉಗ್ರರು ಎಂದು ಕಂಗನಾ ಕಾಮೆಂಟ್‌ ಮಾಡಿದ್ದರು. ಈ ವೇಳೆ ಕೇಂದ್ರ ಸರ್ಕಾರದ ಪರವಾಗಿ ಮಾತನಾಡಿದ್ದರು. ಅಷ್ಟೆ ಅಲ್ಲದೇ ತಮ್ಮ ಅನೇಕ ಹೇಳಿಕೆಗಳ ಮೂಲಕ ವಿವಾದಕ್ಕೆ ಕಾರಣವಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *