ನವದೆಹಲಿ: ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ಜಾಮೀನು (Bail) ನೀಡಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಬಂಧನ ಪ್ರಶ್ನಿಸಿ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬಳಿಕ ಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ನ್ಯಾ.ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಾಯಿತು. ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್ 45ರ ಕಠಿಣತೆಯ ಹೊರತಾಗಿಯೂ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕೇಜ್ರಿವಾಲ್ ಮೂರು ಸಂದರ್ಭಗಳಲ್ಲಿ ಮಧ್ಯಂತರ ಜಾಮೀನು ಪಡೆದಿದ್ದಾರೆ ಎಂದು ಇಡಿ ಪ್ರಕರಣವನ್ನು ಉಲ್ಲೇಖಿಸಿದರು. ಇದನ್ನೂ ಓದಿ: ಬಾಲ ರಾಮನ ಮೂರ್ತಿ ಕೆತ್ತಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಮೆರಿಕ ವೀಸಾ ನಿರಾಕರಣೆ
ಪಿಎಂಎಲ್‌ಎಯ ಕಟ್ಟುನಿಟ್ಟಿನ ನಿಬಂಧನೆಗಳ ಅಡಿಯಲ್ಲಿ ಕೇಜ್ರಿವಾಲ್ ಜಾಮೀನು ಪಡೆದಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯು ಮನಿ ಲಾಂಡರಿಂಗ್ ಕಾನೂನಿನಂತೆ ಕಠಿಣ ಷರತ್ತುಗಳನ್ನು ಹೊಂದಿಲ್ಲದ ಕಾರಣ ಸಿಬಿಐ ಪ್ರಕರಣದಲ್ಲಿ ಅವರಿಗೆ ಸಾಮಾನ್ಯ ಜಾಮೀನನ್ನು ಹೇಗೆ ನಿರಾಕರಿಸಬಹುದು ಎಂದು ಸಿಂಘ್ವಿ ಆಶ್ಚರ್ಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಹವಾಮಾನ ನಿರೋಧಕ, ಜೈವಿಕ ಬಲವರ್ಧಿತ ಹೊಸ ತಳಿಗಳು ರೈತರಿಗೆ ಹೇಗೆ ಉಪಯುಕ್ತ?
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ.ಸೂರ್ಯಕಾಂತ್, ನಾವು ಯಾವುದೇ ಮಧ್ಯಂತರ ಜಾಮೀನು ನೀಡುತ್ತಿಲ್ಲ. ಈ ಸಂಬಂಧ ಸಿಬಿಐಗೆ ನೋಟಿಸ್ ನೀಡುತ್ತಿದ್ದೇವೆ. ಅಗಸ್ಟ್ 23ರ ಒಳಗೆ ಅವರು ಪ್ರತಿಕ್ರಿಯೆ ನೀಡಲಿ ಎಂದು ವಿಚಾರಣೆ ಮುಂದೂಡಿದರು. ಹೈಕೋರ್ಟ್ ಜಾಮೀನು ನಿರಾಕರಿಸಿದ ಬಳಿಕ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲ್ಲ: ಡಿಕೆಶಿ