ಬೆಂಗಳೂರು: ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆ ವಿಚಾರ ಎಲೆಕ್ಷನ್ ಹೊತ್ತಲ್ಲಿ ಮರುಜೀವ ಪಡೆದಿದೆ. ಬೆಂಗಳೂರಿನಲ್ಲಿ ಸ್ಟೀಲ್ ಬ್ರಿಡ್ಜ್ ಕಾಮಗಾರಿಗೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಬಿ.ಪಿ ಮಹೇಶ್ ಎಂಬವರು ಕಾಮಗಾರಿಗೆ ಮಧ್ಯಂತರ ತಡೆ ನೀಡುವಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರಿಂಕೊರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನ ಇತ್ಯರ್ಥಪಡಿಸಿದ್ದು, ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಮೂಲ ಅರ್ಜಿಯನ್ನು ಶೀಘ್ರ ಇತ್ಯರ್ಥಪಡಿಸುವಂತೆಯೂ ಕರ್ನಾಟಕ ಹೈಕೋರ್ಟ್‍ಗೆ ಸೂಚನೆ ನೀಡಿದೆ.
Advertisement
Advertisement
ಮೊದಲಿಗೆ ಬಿ.ಪಿ ಮಹೇಶ್ ಕಾಮಗಾರಿಗೆ ತಡೆ ನೀಡುವಂತೆ ಹೈಕೋರ್ಟ್‍ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಆದ್ರೆ ಸ್ಟೀಲ್ ಬ್ರಿಡ್ಜ್ ಕಾಮಗಾರಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ್ದ ಹಿನ್ನಲೆಯಲ್ಲಿ ಸುಪ್ರಿಂಕೊರ್ಟ್ ಮೆಟ್ಟಿಲೇರಿದ್ದರು. ಆದ್ರೆ ಈಗ ಸುಪ್ರೀಂ ಕೋರ್ಟ್‍ನಲ್ಲೂ ಮಹೇಶ್ ಅವರಿಗೆ ಹಿನ್ನಡೆಯಾಗಿದೆ.
Advertisement
ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣವಾಗುತ್ತಾ ಎಂಬ ಪ್ರಶ್ನೆ ಈಗ ಮೂಡಿದೆ. ಶಿವಾನಂದ ಜಂಕ್ಷನ್‍ನಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಬಿಬಿಎಂಪಿ ಯೋಜನೆ ರೂಪಿಸಿತ್ತು.