ನವದೆಹಲಿ: ಉತ್ತರ ಪ್ರದೇಶದಲ್ಲಿನಡೆಯುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಗೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಬಿ.ಆರ್.ಗವಿ ಮತ್ತು ಪಿ.ಎಸ್ ನರಸಿಂಹ ಅವರಿದ್ದ ದ್ವಿಸದಸ್ಯ ಪೀಠ, ಈಗಾಗಲೇ ಜಮೀಯಾ ಉಲೇಮಾ ಇ ಹಿಂದ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಆಗಸ್ಟ್ 10ಕ್ಕೆ ನಡೆಯಲಿದೆ. ಅಂದೇ ಈ ಅರ್ಜಿಗಳ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿತು. ಇದನ್ನೂ ಓದಿ: 68 ಸಾವಿರ ಒತ್ತುವರಿ ತೆರವು, 844 ಕೋಟಿ ಮೌಲ್ಯ ಆಸ್ತಿ ಜಪ್ತಿ, 1.2 ಲಕ್ಷ ಲೌಡ್ ಸ್ಪೀಕರ್ ತೆರವು – 100 ದಿನದ ಸಾಧನೆ ಎಂದ ಯೋಗಿ
Advertisement
Advertisement
ಕಾನೂನಿನ ನಿಯಮಗಳನ್ನು ಅನುಸರಿಸಬೇಕು. ಒಂದು ವೇಳೆ ನಾವು ಈ ರೀತಿಯ ಆದೇಶವನ್ನು ನೀಡಿದರೆ ಅಧಿಕಾರಿಗಳು ನಿಯಮವನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.
Advertisement
ಇತ್ತೀಚೆಗೆ ನಡೆದ ಹಿಂಸಾಚಾರದ ಬಳಿಕ ಉತ್ತರ ಪ್ರದೇಶ ಮತ್ತು ಬೇರೆ ರಾಜ್ಯಗಳಲ್ಲಿ ಆರೋಪಿಗಳ ಆಸ್ತಿಗಳನ್ನು ನಾಶ ಮಾಡದಂತೆ ನಿರ್ದೇಶನ ಕೊಡಬೇಕೆಂದು ಕೋರಿ ಮುಸ್ಲಿಂ ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು.
Advertisement
ಹಿಂಸಾಚಾರ ನಡೆಯುವ ಮೊದಲೇ ಒತ್ತುವರಿದಾರರಿಗೆ ನೋಟಿಸ್ ನೀಡಲಾಗಿದೆ. ಕಾನೂನು ಪ್ರಕಾರವೇ ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡ ಅಕ್ರಮ ಕಟ್ಟಡಗಳನ್ನು ಮಾತ್ರ ಕೆಡವಲಾಗುತ್ತಿದೆ ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.