ನವದೆಹಲಿ: ಪ್ರತಿ ದಿನ 24,000 ಕ್ಯೂಸೆಕ್ ಕಾವೇರಿ ನೀರು (Cauvery Water Dispute) ಬಿಡಲು ಕರ್ನಾಟಕಕ್ಕೆ (Karnataka) ನಿರ್ದೇಶನ ನೀಡುವಂತೆ ತಮಿಳುನಾಡು (Tamil Nadu) ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.
ತಮಿಳುನಾಡು ಪರ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಕರ್ನಾಟಕದ ಪರ ಶ್ಯಾಮ್ ದಿವಾನ್ ಅವರ ವಾದವನ್ನು ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆಲಿಸಿತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಕರ್ನಾಟಕ ಬಿಡುಗಡೆ ಮಾಡಿದ ನೀರಿನ ಪ್ರಮಾಣದ ಬಗ್ಗೆ ವರದಿ ಕೇಳಿತು. ಇದನ್ನೂ ಓದಿ: ತಮಿಳುನಾಡಿಗೆ ಕೆಆರ್‌ಎಸ್ ನೀರು ಬಂದ್ – ಇಂದು ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ವಿಚಾರಣೆ
Advertisement
Advertisement
ಕೇಂದ್ರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಮುಂದಿನ ಹದಿನೈದು ದಿನಗಳ ಕಾಲ ನೀರು ಬಿಡಲು ನಿರ್ಧರಿಸಲು ಪ್ರಾಧಿಕಾರವು ಸೋಮವಾರ ಸಭೆ ನಡೆಸಲಿದೆ ಎಂದು ಹೇಳಿದರು.
Advertisement
ನೀರು ಬಿಡಲು ನೀಡಿರುವ ನಿರ್ದೇಶನಗಳನ್ನು ಪಾಲಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು CWMA ತನ್ನ ವರದಿಯನ್ನು ಸಲ್ಲಿಸುವುದು ಸೂಕ್ತ ಎಂದು ಪೀಠವು ಹೇಳಿದೆ. ಇದನ್ನೂ ಓದಿ: ಚಂದ್ರನ ಮೇಲಿರುವ ಚಂದ್ರಯಾನ-3 ಲ್ಯಾಂಡರ್ ಫೋಟೋ ಸೆರೆ ಹಿಡಿದ ಚಂದ್ರಯಾನ-2ರ ಆರ್ಬಿಟರ್
Advertisement
ನೀರು ಬಿಡಲು ಕಾವೇರಿ ನಿರ್ವಹಣಾ ಪ್ರಾಧಿಕಾರ ನೀಡಿದ್ದ ಗಡುವು ಇಂದಿಗೆ ಮುಕ್ತಾಯವಾಗುತ್ತಿದೆ. ಈ ನಡುವೆ ಆದೇಶ ಸರಿಯಾಗಿ ಪಾಲನೆಯಾಗಿಲ್ಲ. ಕಡಿಮೆ ಮಳೆಯ ವರ್ಷವಾಗಿದ್ದರೂ, ಪ್ರಸ್ತುತ ನಾವು ಅತ್ಯಂತ ಭೀಕರ ಬರವನ್ನು ಅನುಭವಿಸುತ್ತಿದ್ದೇವೆ. ನೀರು ಬಿಡದಿದ್ದರೆ ಭಾರಿ ಅನಾಹುತವಾಗಲಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ನೀರು ಬಿಡದಿದ್ದರೆ, ಅವರ ವಿರುದ್ಧ ನ್ಯಾಯಾಂಗ ನಿಂದನೆಯನ್ನು ಮುಂದುವರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿತು.
ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ, ನಾವು ತಜ್ಞರಲ್ಲ. ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ಪ್ರಕರಣದ ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಕೋರ್ಟ್ ಮುಂದೂಡಿತು. ಮಧ್ಯಂತರ ಅವಧಿಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆ ಕರೆಯುವಂತೆ ಸೂಚನೆ ನೀಡಿತು.
Web Stories