– ಕೇಂದ್ರದ ಆದೇಶ ಮರುಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿನ ಆರ್ಟಿಕಲ್ 370 (Article 370) ರದ್ದು ಮಾಡಿದ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಕೇಂದ್ರ ಸರ್ಕಾರದ (Union Government of India) ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಸುಪ್ರೀಂ ಕೋರ್ಟ್‌ನ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ತನ್ನ ಚೇಂಬರ್‌ನಲ್ಲಿ ವಿಚಾರಣೆ ನಡೆಸಿದ ಬಳಿಕ ಅರ್ಜಿಯನ್ನು ವಜಾಗೊಳಿಸಿದೆ.
ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದಾಖಲೆಯಲ್ಲಿ ಯಾವುದೇ ದೋಷ ಕಂಡುಬರದ ಹಿನ್ನೆಲೆ ಸುಪ್ರೀಂ ಕೋರ್ಟ್ ನಿಯಮಗಳು 2013ರ ಆದೇಶ XLVII ನಿಯಮ 1ರ ಅಡಿಯಲ್ಲಿ ಪರಿಶೀಲನೆಗೆ ಅಗತ್ಯವಿಲ್ಲ ಎಂದು ಹೇಳಿ, ಅರ್ಜಿಗಳನ್ನು ವಜಾಗೊಳಿಸಿದೆ. ಇದನ್ನೂ ಓದಿ: ಡಿವೈಎಸ್‌ಪಿ ಬ್ಯಾಂಕ್ ಖಾತೆಗೆ ಕನ್ನ – 15 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಸೈಬರ್ ಕಳ್ಳರು!
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅಂತಿಮವಾಗಿ ಈ ಪ್ರದೇಶಕ್ಕೆ ರಾಜ್ಯತ್ವವನ್ನು ಪುನಃ ಸ್ಥಾಪಿಸಲಾಗುವುದು ಎಂದು ನೀಡಿದ ಭರವಸೆಯನ್ನು ದಾಖಲಿಸಿದ ಸುಪ್ರೀಂ ಕೋರ್ಟ್ ಕಳೆದ ಡಿಸೆಂಬರ್ ನಲ್ಲಿ ಆರ್ಟಿಕಲ್ 370 ಅನ್ನು ರದ್ದು ಮಾಡುವ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಿತ್ತು.
ಈ ಆದೇಶವನ್ನು ಪ್ರಶ್ನಿಸಿ ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಇದನ್ನೂ ಓದಿ: ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್ ಬಾಯ್ – ಮುಂದಾಗಿದ್ದೇನು ಗೊತ್ತೇ?