ನವದೆಹಲಿ: ಇಪ್ಪತ್ತು ಸಾವಿರ ಕೋಟಿ ವೆಚ್ಚದಲ್ಲಿ ಕೇಂದ್ರ ದೆಹಲಿಯಲ್ಲಿ ಆರಂಭಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಸೆಂಟ್ರಲ್ ವಿಸ್ಟಾ ಯೋಜನೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಸೆಂಟ್ರಲ್ ವಿಸ್ಟಾ ಯೋಜನೆಗೆ ತಡೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎಸ್.ಎ ಬೊಬ್ಡೆ ನೇತೃತ್ವದ ತ್ರಿ ಸದಸ್ಯ ಪೀಠ ಇದೇ ಮಾದರಿಯಲ್ಲಿ ಮತ್ತೊಂದು ಅರ್ಜಿ ವಿಚಾರಣೆ ಹಂತದಲ್ಲಿದ್ದು ಒಂದೇ ಮಾದರಿಯ ಅಂಶಗಳಿರುವ ಈ ಅರ್ಜಿಯ ವಿಚಾರಣೆ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯಪಟ್ಟಿದೆ.
Advertisement
Advertisement
ದೇಶದಲ್ಲಿ ಕೊರೊನಾ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಯಾರು ಏನನ್ನು ಮಾಡಲು ಸಾಧ್ಯವಿಲ್ಲ. ಸದ್ಯ ಈ ಅರ್ಜಿ ವಿಚಾರಣೆ ನಡೆಸುವ ತುರ್ತು ಅವಶ್ಯಕತೆ ಇಲ್ಲ. ರಾಜೀವ್ ಸೂರಿ ಎನ್ನುವವರು ಇದೇ ಮಾದರಿಯ ಅರ್ಜಿಯನ್ನು ದೆಹಲಿಯ ಹೈಕೋರ್ಟ್ ಸಲ್ಲಿಸಿದ್ದು ವಿಚಾರಣೆ ಹಂತದಲ್ಲಿದೆ. ಈ ಸಂದರ್ಭದಲ್ಲಿ ಇಲ್ಲಿ ವಿಚಾರಣೆ ಅವಶ್ಯಕತೆ ಇಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
Advertisement
Advertisement
ಏನಿದು ಸೆಂಟ್ರಲ್ ವಿಸ್ಟಾ?
ಕೇಂದ್ರ ದೆಹಲಿಯ ಲುಟೆಯೇನ್ಸ್ ವಲಯದಲ್ಲಿ ಹೊಸ ಸಂಸತ್ ಭವನ ಕಟ್ಟಡ ಸೇರಿದಂತೆ ಸುಮಾರು ಇಪ್ಪತ್ತು ಸಾವಿರ ಕೋಟಿ ವೆಚ್ಚದಲ್ಲಿ ಇತರೆ ಸರ್ಕಾರಿ ಕಚೇರಿಗಳನ್ನು ನಿರ್ಮಾಣ ಮಾಡಲು ಪ್ರಧಾನಿ ಮೋದಿ ಸರ್ಕಾರ ನಿರ್ಧರಿಸಿದೆ. ಇದಕ್ಕೆ ಸೆಂಟ್ರಲ್ ವಿಸ್ಟಾ ಎಂದು ನಾಮಕರಣ ಮಾಡಲಾಗಿದೆ.