ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.
ಕಳೆದ ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka Highcourt) ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ (Supreme Court) ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ನ್ಯಾ.ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು.
Advertisement
Advertisement
ವಿಚಾರಣೆ ವೇಳೆ ನ್ಯಾಯಾಲಯ, ಆರೋಪಿಯ ವಿರುದ್ಧ ಇನ್ನೂ ಹಲವು ದೂರುಗಳಿವೆ. ಇಷ್ಟು ಮಾತ್ರವಲ್ಲದೇ ಆರೋಪಿಯೂ ಸಾಕಷ್ಟು ಪ್ರಭಾವಶಾಲಿಯಾಗಿರುವ ಹಿನ್ನಲೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ವೇಳೆ ನಾನು 6 ತಿಂಗಳ ನಂತರ ಅರ್ಜಿ ಸಲ್ಲಿಸಬಹುದೇ? ಎಂದು ವಕೀಲ ರೋಹಟಗಿ ವಿನಂತಿಸಿದರು ಇದಕ್ಕೆ ನಾವು ಏನನ್ನೂ ಹೇಳುವುದಿಲ್ಲ ಎಂದು ನ್ಯಾಯಮೂರ್ತಿ ತ್ರಿವೇದಿ ಪ್ರತಿಕ್ರಿಯಿಸಿದರು.
Advertisement
ಈ ಹಿಂದೆ ಸಂಸದನಾಗಿದ್ದೆ, ಮತ್ತೊಮ್ಮೆ ಆಯ್ಕೆ ಬಯಸಿ ಸಂಸದ ಸ್ಥಾನಕ್ಕೆ ಸ್ಪರ್ಧಿಸಿದ್ದೆ, ಚುನಾವಣೆ ವೇಳೆ ಹೊರ ಬಂದ ಈ ಪ್ರಕರಣದಿಂದ ನಾನು ಸೋತಿದ್ದೇನೆ. ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಪರಾಧವನ್ನು ದೂರಿನಲ್ಲಿ ಉಲ್ಲೇಖಿಸದ ಕಾರಣ ಜಾಮೀನು ನೀಡಬೇಕು ಎಂದು ಪ್ರಜ್ವಲ್ ಪರ ರೋಹಟಗಿ ಮನವಿ ಮಾಡಿದ್ದರು.
Advertisement
ಪ್ರಜ್ವಲ್ ರೇವಣ್ಣ (Prajwal Revanna) ತಂದೆ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ವಿರುದ್ಧ ಕಳೆದ ಏಪ್ರಿಲ್ 28ರಂದು ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದರು. ಹೊಳೆನರಸೀಪುರ (Holenarasipura) ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿತ್ತು. ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿತ್ತು. 2015 ರಲ್ಲಿ ಹೆಚ್.ಡಿ.ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ನೀಡಿದ್ದರು. ತಂದೆ ಮತ್ತು ಮಗನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪಗಳನ್ನು ಮಾಡಿದ್ದರು.