ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರನ್ನು 6 ವರ್ಷಗಳ ವರೆಗೆ ಚುನಾವಣೆಯಿಂದ ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ.
ಚುನಾವಣಾ ಪ್ರಚಾರದ ವೇಳೆ ‘ದ್ವೇಷ ಭಾಷಣ’ ಮಾಡಿದ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮೋದಿ ಅವರನ್ನು ಚುನಾವಣೆಯಿಂದ ನಿರ್ಬಂಧಿಸಲು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎಸ್‌ಸಿ ಶರ್ಮಾ ಅವರ ಪೀಠವು ಅರ್ಜಿದಾರರಿಗೆ ದೂರು ಪರಿಹಾರಕ್ಕಾಗಿ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಲು ಹೇಳಿದೆ. ಇದನ್ನೂ ಓದಿ: ಪವಿತ್ರ ಗಂಗೆಗೆ ನಮಿಸಿ ಮೂರನೇ ಬಾರಿ ವಾರಣಾಸಿಯಿಂದ ನಾಮಪತ್ರ ಸಲ್ಲಿಸಿದ ಮೋದಿ
ನೀವು ಅಧಿಕಾರಿಗಳನ್ನು ಸಂಪರ್ಕಿಸಿದ್ದೀರಾ? ರಿಟ್ ಆಫ್ ಮ್ಯಾಂಡಮಸ್‌ಗಾಗಿ ನೀವು ಮೊದಲು ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಪೀಠ ತಿಳಿಸಿದೆ. ಅರ್ಜಿದಾರರು ಮನವಿಯನ್ನು ಹಿಂತೆಗೆದುಕೊಂಡರು.
ಪ್ರಜಾಪ್ರತಿನಿಧಿ ಕಾಯ್ದೆಯಡಿ ಪ್ರಧಾನಿ ಮೋದಿ ಅವರನ್ನು ಆರು ವರ್ಷಗಳ ಕಾಲ ಚುನಾವಣೆಯಿಂದ ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಆನಂದ್ ಎಸ್ ಜೊಂಧಲೆ ಮೂಲಕ ಫಾತಿಮಾ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ಇದನ್ನೂ ಓದಿ: ದಶಾಶ್ವಮೇಧ ಘಾಟ್‌ನಲ್ಲಿ ಗಂಗಾರತಿ ನೆರವೇರಿಸಿದ ಪ್ರಧಾನಿ ಮೋದಿ