ನವದೆಹಲಿ: ಪೋಕ್ಸೊ ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪೊಂದನ್ನು ನೀಡಿದೆ. ಪೋಕ್ಸೊ (POCSO) ಕಾಯ್ದೆಯಡಿ ದೋಷಿಯಾಗಿದ್ದ ವ್ಯಕ್ತಿಯೊಬ್ಬನಿಗೆ ಸುಪ್ರೀಂ ಕೋರ್ಟ್ ಜೈಲು ಶಿಕ್ಷೆಯಿಂದ ರಕ್ಷಣೆ ನೀಡಿದೆ.
ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ದ್ವಿ ಸದಸ್ಯ ಪೀಠವು, ಆರೋಪಿಯ ಶಿಕ್ಷೆಯನ್ನು ತಗ್ಗಿಸಿ, ಜೈಲು ಶಿಕ್ಷೆಯಿಂದ ವಿನಾಯಿತಿ ನೀಡಿತು. ಆರೋಪಿಯು ಸಂತ್ರಸ್ತೆಯನ್ನು ಮದುವೆಯಾಗಿರುವ ಕಾರಣವನ್ನು ಗಣನೆಗೆ ತೆಗೆದುಕೊಂಡು ಈ ತೀರ್ಪು ನೀಡಲಾಗಿದೆ. ಕಾನೂನು ಪ್ರಕ್ರಿಯೆಯು ಘಟನೆಗಿಂತ ಸಂತ್ರಸ್ತೆಗೆ ಹೆಚ್ಚಿನ ಸಮಸ್ಯೆಯನ್ನುಂಟುಮಾಡಿದೆ ಎಂದು ನ್ಯಾಯಾಲಯ ತಿಳಿಸಿತು. ಇದನ್ನೂ ಓದಿ: ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ & ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು
ಕಾನೂನಿನ ಕಟ್ಟುನಿಟ್ಟಾದ ಅನುಷ್ಠಾನದ ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಸಂತ್ರಸ್ತೆಯ ಒಳಿತಿಗಾಗಿ ಈ ತೀರ್ಪನ್ನು ನೀಡಲಾಗಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಆದರೆ, ಈ ತೀರ್ಪು ಪೋಕ್ಸೊ ಕಾಯ್ದೆಯ ಗಂಭೀರತೆಯನ್ನು ಕಡಿಮೆಗೊಳಿಸುವುದಿಲ್ಲ ಎಂದು ಒತ್ತಿ ಹೇಳಿದೆ.
ಪ್ರಕರಣದಲ್ಲಿ ಆರೋಪಿಯು POCSO ಕಾಯ್ದೆಯಡಿ ಲೈಂಗಿಕ ಅಪರಾಧಕ್ಕೆ ಸಂಬಂಧಿಸಿದ ಆರೋಪದಲ್ಲಿ ದೋಷಿಯಾಗಿದ್ದ. ಆದರೆ, ಆರೋಪಿಯು ಸಂತ್ರಸ್ತೆಯೊಂದಿಗೆ ಮದುವೆಯಾಗಿದ್ದಾನೆ ಎಂಬ ಅಂಶವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿತು. ಈ ಮದುವೆಯು ಒಪ್ಪಿಗೆಯಿಂದ ನಡೆದಿದ್ದು, ಇದು ಸಂತ್ರಸ್ತೆಯ ಜೀವನ ಮತ್ತು ಭವಿಷ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎಂದು ಕೋರ್ಟ್ ತಿಳಿಸಿದೆ. ಇದನ್ನೂ ಓದಿ: Delhi Election| ಆಪ್‌ಗಿಂತ ಮೂರು ಪಟ್ಟು ಹೆಚ್ಚು ಖರ್ಚು ಮಾಡಿತ್ತು ಕಾಂಗ್ರೆಸ್ – 68 ಮಂದಿಗೆ ಬಿಜೆಪಿಯಿಂದ ತಲಾ 25 ಲಕ್ಷ