ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆ (Muslim Women) ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದೆ.
ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ ಪಾವತಿಸುವ ನಿರ್ದೇಶನವನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಅರ್ಜಿ ವಜಾಗೊಳಿಸಿದೆ. ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ – ನಾಳೆ ಹೈಕೋರ್ಟ್‌ನಲ್ಲಿ ವಿಚಾರಣೆ
Advertisement
Advertisement
ಜೀವನಾಂಶವನ್ನು ಕೋರುವ ಕಾನೂನು ಎಲ್ಲಾ ವಿವಾಹಿತ ಮಹಿಳೆಯರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಪೀಠವು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ನಾಗರತ್ನ ಮತ್ತು ನ್ಯಾಯಮೂರ್ತಿ ಮಾಸಿಹ್ ಅವರು ಪ್ರತ್ಯೇಕ, ಆದರೆ ಏಕಕಾಲೀನ ತೀರ್ಪುಗಳನ್ನು ನೀಡಿದರು.
Advertisement
ಸೆಕ್ಷನ್ 125 ವಿವಾಹಿತ ಮಹಿಳೆಯರಿಗೆ ಮಾತ್ರವಲ್ಲ, ಎಲ್ಲಾ ಮಹಿಳೆಯರಿಗೆ ಅನ್ವಯಿಸುತ್ತದೆ. ಈ ಪ್ರಮುಖ ತೀರ್ಮಾನದೊಂದಿಗೆ ನಾವು ಕ್ರಿಮಿನಲ್ ಮೇಲ್ಮನವಿಯನ್ನು ವಜಾಗೊಳಿಸುತ್ತಿದ್ದೇವೆ ಎಂದು ನ್ಯಾಯಮೂರ್ತಿ ನಾಗರತ್ನ ತಿಳಿಸಿದ್ದಾರೆ. ಇದನ್ನೂ ಓದಿ: ಬಿಎಂಡಬ್ಲ್ಯೂ ಹಿಟ್ ಆ್ಯಂಡ್ ರನ್ ಕೇಸ್; 72 ಗಂಟೆಗಳ ಬಳಿಕ ರಾಜಕಾರಣಿ ಪುತ್ರ ಅರೆಸ್ಟ್
Advertisement
ಜೀವನಾಂಶ ದಾನವಲ್ಲ, ವಿವಾಹಿತ ಮಹಿಳೆಯರ ಹಕ್ಕು ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ನಾಗರತ್ನ ಅವರು, ಗೃಹಿಣಿಯಾಗಿರುವ ಹೆಂಡತಿ ಭಾವನಾತ್ಮಕವಾಗಿ ಮತ್ತು ಇತರ ರೀತಿಯಲ್ಲಿ ಅವಲಂಬಿತಳಾಗಿದ್ದಾಳೆ ಎಂಬ ಅಂಶದ ಬಗ್ಗೆ ಕೆಲವು ಗಂಡಂದಿರಿಗೆ ಪ್ರಜ್ಞೆ ಇರುವುದಿಲ್ಲ. ಭಾರತೀಯ ಪುರುಷನು ಗೃಹಿಣಿಯ ಪಾತ್ರವನ್ನು ಗುರುತಿಸಬೇಕಾದ ಸಮಯ ಬಂದಿದೆ ಎಂದು ಹೇಳಿದ್ದಾರೆ.