ಮಡಿಕೇರಿ: ಬಹುತೇಕ ಅರಣ್ಯ ಪ್ರದೇಶದಿಂದಲೇ ಕೂಡಿರುವ ಕೊಡಗು (Kodagu) ಜಿಲೆಯಲ್ಲಿ ಸಾಕಷ್ಟು ಅರಣ್ಯ ಪ್ರದೇಶ ಒತ್ತುವರಿಯಾಗಿದೆ. ಆದರೆ ಆಳುವವರಿಂದಲೇ ಅರಣ್ಯ ಒತ್ತುವರಿಯಾಗಿದೆ ಎಂದು ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೀಗಾಗಿ ಪ್ರಕರಣ ಕುರಿತು ವರದಿ ನೀಡುವಂತೆ ಸುಪ್ರೀಂ ಕೋರ್ಟ್ (Supreme Court) ರಾಜ್ಯ ಸರ್ಕಾರಕ್ಕೆ (Karnataka Government) ನೋಟಿಸ್ ನೀಡಿದೆ.
ಕಾಶ್ಮೀರದಂತೆ ಕಾಣುವ ಕೊಡಗು ಜಿಲ್ಲೆ ಬಹುತೇಕ ಬೆಟ್ಟಗುಡ್ಡಗಳಿಂದಲೇ ಕೂಡಿರುವ ಪ್ರದೇಶ. ಆದರೆ ನೀವು ನೋಡುತ್ತಿರುವ ಈ ಪ್ರದೇಶ ಸದ್ಯಕ್ಕೆ ಊರಾಗಿದ್ದರೂ, ಇದು ಅರಣ್ಯ ಪ್ರದೇಶ ಎನ್ನಲಾಗುತ್ತಿದೆ. ಅದನ್ನು ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ (K.G.Bopaiah) ಸೇರಿದಂತೆ 200 ಕ್ಕೂ ಹೆಚ್ಚು ಜನರು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ಕಾವೇರಿ ಸೇನೆಯ ಮುಖಂಡ ರವಿ ಚಂಗಪ್ಪ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: Top Performing Airports 2022 – ವಿಶ್ವದಲ್ಲೇ ಬೆಂಗಳೂರು ನಂ.2
Advertisement
Advertisement
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ, ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನೊಟೀಸ್ ನೀಡಿದೆ. ಮಡಿಕೇರಿ ತಾಲ್ಲೂಕಿನ ಕರ್ಣಂಗೇರಿ ಗ್ರಾಮದ ಸರ್ವೇ ನಂಬರ್ 289/7 ರಲ್ಲಿ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಸೇರಿದಂತೆ 200 ಜನರು ಅಕ್ರಮವಾಗಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ದೂರಲಾಗಿದೆ.
Advertisement
ಈ ಸಂಬಂಧ 2018 ರಲ್ಲಿ ಕಾವೇರಿ ಸೇನೆಯ ರವಿಚಂಗಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದ ವೇಳೆ ವಕೀಲರು ಸರಿಯಾಗಿ ಕೋರ್ಟಿಗೆ ಹಾಜರಾಗದ ಹಿನ್ನೆಲೆಯಲ್ಲಿ ಪ್ರಕರಣವನ್ನು ವಜಾ ಮಾಡಲಾಗಿತ್ತು. ಶಾಸಕ ಕೆ.ಜಿ. ಬೋಪಯ್ಯ ಅವರು 2009 ರಲ್ಲಿಯೇ ಮನೆ ನಿರ್ಮಿಸಿಕೊಂಡಿದ್ದಾರೆ. ಬಳಿಕ ರವಿಚಂಗಪ್ಪ 2018 ರಲ್ಲಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಾಹಿತಿ ಕೇಳಿದಾಗ, ಕಚೇರಿಯಿಂದ ತಾಂತ್ರಿಕ ಅಭಿಪ್ರಾಯ ನೀಡಿಲ್ಲ ಎಂದು ವರದಿ ನೀಡಿದೆ. ಇದೇ ವರ್ಷದಲ್ಲಿಯೇ ಮನೆ ನಿರ್ಮಿಸುವುದಕ್ಕೆ ಭೂಪರಿವರ್ತನೆಗೆ ಅವಕಾಶ ನೀಡಿರುವ ಬಗ್ಗೆ ನಗರಸಭೆಯಲ್ಲಿ ಮಾಹಿತಿ ಕೇಳಿದಾಗಲೂ ಯಾವುದೇ ಮಾಹಿತಿ ಇಲ್ಲ ಎಂದು ವರದಿ ನೀಡಿದೆ. ಆದರೂ ಕೆ.ಜಿ. ಬೋಪಯ್ಯ ಅವರು ಮನೆ ನಿರ್ಮಿಸಿರುವುದು ಅಕ್ರಮ ಎಂದು ರವಿಚಂಗಪ್ಪ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಹೈಕಮಾಂಡ್ ಟಾರ್ಗೆಟ್ ಸಿದ್ದರಾಮಯ್ಯ – ಒಂದೇ ಏಟಿಗೆ ಎರಡು ಹಕ್ಕಿ ಹೊಡೆಯುವ ತಂತ್ರ?
Advertisement
ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಕೆ.ಜಿ. ಬೋಪಯ್ಯ, 1933 ರಲ್ಲಿಯೇ ಆ ಜಾಗ ಡೀನೋಟಿಫೈ ಆಗಿದ್ದು, ಅದಕ್ಕೆ ಕಂದಾಯ ಎಲ್ಲವನ್ನು ಕಟ್ಟಲಾಗಿದೆ. ವಿಠ್ಠಲ ಪೊನ್ನಪ್ಪ ಎಂಬವರಿಂದ ಜಾಗವನ್ನು ನಾನು ಖರೀದಿಸಿ ಇತ್ತೀಚೆಗೆ ಮನೆ ಕಟ್ಟಿಕೊಂಡಿದ್ದೇನೆ. ಆದರೆ ಚುನಾವಣೆ ಸಂದರ್ಭದಲ್ಲಿ ನನ್ನ ವರ್ಚಸ್ಸಿಗೆ ಧಕ್ಕೆ ತರುವುದಕ್ಕಾಗಿಯೇ ಹೀಗೆ ಪ್ರಕರಣ ದಾಖಲಿಸಲಾಗುತ್ತಿದೆ. 2018 ರಲ್ಲಿಯೂ ಇದೇ ರೀತಿ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಪ್ರಕರಣವನ್ನು ವಜಾಗೊಳಿಸಿತು. ಇದೀಗ ಮತ್ತೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ನನ್ನ ವಿರುದ್ಧ ಸುಪ್ರೀಂ ಕೋರ್ಟಿಗೆ ಹೋಗಿದ್ದಾರೆ. ಸುಳ್ಳು ಪ್ರಕರಣ ದಾಖಲಿಸುತ್ತಿರುವ ಇವರ ವಿರುದ್ಧ ನಾನು ಮಾನನಷ್ಟ ಕೇಸ್ ಹೂಡುತ್ತೇನೆ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k