ನವದೆಹಲಿ: ವಿಷಯ ಸುಪ್ರೀಂಕೋರ್ಟ್‌ಗೆ (Supreme Court) ಬರುವ ಮೊದಲೇ ಆಯಾ ರಾಜ್ಯಗಳ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳ ಮೇಲೆ ರಾಜ್ಯಪಾಲರು ಕ್ರಮಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ (Banwarilal Purohit) ಅವರು ವಿಧೇಯಕಗಳನ್ನು ಅನುಮೋದಿಸುವಲ್ಲಿ ವಿಳಂಬ ಮಾಡಿದ್ದರ ವಿರುದ್ಧ ಪಂಜಾಬ್ ಸರ್ಕಾರ (Punjab Govt) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ.
Advertisement
ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ನೇತೃತ್ವದ ಪೀಠ, ವಿಷಯಗಳು ಸುಪ್ರೀಂಕೋರ್ಟ್‌ಗೆ ಬಂದಾಗ ಮಾತ್ರ ರಾಜ್ಯಪಾಲರು ಕಾರ್ಯನಿರ್ವಹಿಸಿದಾಗ ಇದು ಕೊನೆಗೊಳ್ಳಬೇಕು. ರಾಜ್ಯಪಾಲರಿಂದ ಸ್ವಲ್ಪ ಆತ್ಮಶೋಧನೆ ಅಗತ್ಯವಿದೆ. ಅವರು ಜನರ ಚುನಾಯಿತ ಪ್ರತಿನಿಧಿಗಳಲ್ಲ ಎಂದು ವಿಚಾರಣೆಯ ಸಂದರ್ಭದಲ್ಲಿ ಹೇಳಿದೆ.
Advertisement
Advertisement
ಇದೇ ವೇಳೆ ಪಂಜಾಬ್ ರಾಜ್ಯಪಾಲರು ಕೈಗೊಂಡ ಕ್ರಮಗಳ ಕುರಿತು ನವೀಕರಿಸಿದ ವರದಿಯನ್ನು ಸಲ್ಲಿಸುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿ ಪೀಠ ಶುಕ್ರವಾರಕ್ಕೆ ವಿಚಾರಣೆ ಮುಂದೂಡಿತು. ಇದನ್ನೂ ಓದಿ: ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್ ಚಂದ್ರಶೇಖರ್ ಖಡಕ್ ವಾರ್ನಿಂಗ್
Advertisement
ಇಂದಿನ ವಿಚಾರಣೆಯ ಸಂದರ್ಭದಲ್ಲಿ, ಪಂಜಾಬ್ ರಾಜ್ಯಪಾಲರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ಮೆಹ್ತಾ, ಪುರೋಹಿತ್ ಅವರು ತಮ್ಮ ಮುಂದೆ ಇಟ್ಟಿರುವ ಮಸೂದೆಗಳ ಮೇಲೆ ಕ್ರಮ ಕೈಗೊಂಡಿದ್ದಾರೆ ಮತ್ತು ರಾಜ್ಯ ಸರ್ಕಾರದ ಮನವಿಯು ಅನಗತ್ಯ ದಾವೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಪೀಠಕ್ಕೆ ತಿಳಿಸಿದರು. ಈ ವೇಳೆ ಈ ವಾದಕ್ಕೆ ಹೆಚ್ಚಿನ ಮಾಹಿತಿ ನೀಡಿ ಎಂದು ಪೀಠ ಸೂಚಿಸಿತು.
ವಿಚಾರಣೆಯ ಸಂದರ್ಭದಲ್ಲಿ, ಹಿರಿಯ ವಕೀಲ ಮತ್ತು ಭಾರತದ ಮಾಜಿ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರು ಕೇರಳ ಮತ್ತು ತಮಿಳುನಾಡು ಸಲ್ಲಿಸಿದ ಇದೇ ರೀತಿಯ ಅರ್ಜಿಗಳನ್ನು ಪ್ರಸ್ತಾಪಿಸಿ, ಜನರ ಕಲ್ಯಾಣಕ್ಕಾಗಿ ಅಂಗೀಕರಿಸಿದ ಮಸೂದೆಗಳ ಬಗ್ಗೆ ರಾಜ್ಯಪಾಲರು ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.
ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ರಾಜ್ಯಪಾಲ ಆರ್‌ಎನ್ ರವಿ ವಿರುದ್ಧ ಅರ್ಜಿ ಸಲ್ಲಿಸಿದರೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು 8ಕ್ಕೂ ಹೆಚ್ಚು ಮಸೂದೆಗಳ ಪರಿಗಣನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೇರಳ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಶುಕ್ರವಾರ ಎಲ್ಲ ಅರ್ಜಿಗಳು ಒಟ್ಟಿಗೆ ವಿಚಾರಣೆಗೆ ಬರಲಿವೆ.
ಪ್ರಸ್ತುತ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪಂಜಾಬ್ ವಿಧಾನಸಭೆ ಅಂಗೀಕರಿಸಿದ 27 ಮಸೂದೆಗಳಲ್ಲಿ 22ಕ್ಕೆ ಪುರೋಹಿತ್ ತಮ್ಮ ಒಪ್ಪಿಗೆ ನೀಡಿದ್ದಾರೆ. ಸದನದಲ್ಲಿ ಹಣದ ಮಸೂದೆ ಮಂಡಿಸಲು ರಾಜ್ಯಪಾಲರ ಒಪ್ಪಿಗೆ ಬೇಕು. ಈ ಒಪ್ಪಿಗೆ ನೀಡಲು ವಿಳಂಬ ಮಾಡುತ್ತಿದ್ದಾರೆ ಆಪ್ ಸರ್ಕಾರ ಆರೋಪಿಸಿದೆ.