Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
Last updated: April 2, 2026 2:32 pm
Public TV
Share
3 Min Read
Supreme Court 1
SHARE

– 10 ಗಂಟೆಗಳ ಕಾಲ ಒತ್ತೆಯಿಟ್ಟಿದ್ದ ಜನ
– ಅತ್ಯಂತ ಧ್ರುವೀಕರಣಗೊಂಡಿರುವ ರಾಜ್ಯ

ನವದೆಹಲಿ: ಪಶ್ಚಿಮ ಬಂಗಾಳದ ಮಾಲ್ಡಾ (Malda) ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ವೇಳೆ ನಡೆದ ಹಿಂಸಾಚಾರ ಮತ್ತು ನ್ಯಾಯಾಧೀಶರ ಮೇಲಿನ ದಾಳಿಯನ್ನು ಸುಪ್ರೀಂ ಕೋರ್ಟ್ (Supreme Court) ಕಟು ಪದಗಳಿಂದ ಖಂಡಿಸಿದೆ.

ಕೋಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು ಪತ್ರ ಬರೆದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಇಂದು ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಿತು.

ಪಶ್ಚಿಮ ಬಂಗಾಳ (West Bengal) ಅತ್ಯಂತ ಧ್ರುವೀಕರಣಗೊಂಡಿರುವ ರಾಜ್ಯವಾಗಿದೆ. ನ್ಯಾಯಾಂಗದ ಅಧಿಕಾರಿಗಳನ್ನು ಒತ್ತೆ ಇರಿಸಿಕೊಂಡಿದ್ದು ನ್ಯಾಯಾಂಗದ ಮೇಲೆ ನಡೆದ ವ್ಯವಸ್ಥಿತ ದಾಳಿ. ರಾಜ್ಯದಲ್ಲಿ ಅರಾಜಕತೆಯನ್ನು ಸಹಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠ ಆಕ್ರೋಶ ಹೊರಹಾಕಿತು.

ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಈ ಘಟನೆಯು ಕೇವಲ ಪ್ರತಿಭಟನೆಯಲ್ಲ, ಬದಲಿಗೆ ನ್ಯಾಯಾಂಗ ಅಧಿಕಾರಿಗಳ ಮನೋಬಲ ಕುಂದಿಸಲು ಮತ್ತು ಚುನಾವಣಾ ಪ್ರಕ್ರಿಯೆಯನ್ನು ಅಡ್ಡಿಪಡಿಸಲು ನಡೆಸಿದ ಪೂರ್ವಯೋಜಿತ ಮತ್ತು ಸಂಘಟಿತ ಪ್ರಯತ್ನ ಎಂದು ಅಭಿಪ್ರಾಯಪಟ್ಟು ಚಾಟಿ ಬೀಸಿದೆ.

ಚುನಾವಣಾ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳ ಸುರಕ್ಷತೆಗಾಗಿ ತಕ್ಷಣವೇ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

VIDEO | West Bengal: Protesters in Malda’s Mothabari blocked seven Election Observers, demanding inclusion of names in the voter list. Central forces and police later rescued the observers and brought them to Malda city.

(Full video available on PTI Videos -… pic.twitter.com/ZuTXHQ9z9f

— Press Trust of India (@PTI_News) April 1, 2026

ರಾಜ್ಯ ಸರ್ಕಾರವು ತನ್ನ ಕರ್ತವ್ಯದಿಂದ ವಿಮುಖವಾಗಿದೆ ಎಂದು ಹೇಳಿದ ಕೋರ್ಟ್ ಅಧಿಕಾರಿಗಳಿಗೆ ರಕ್ಷಣೆ ನೀಡಲು ವಿಫಲರಾಗಿದ್ದಕ್ಕೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಅವರಿಗೆ ಸುಪ್ರೀಂ ಕೋರ್ಟ್ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.

ಈ ದಾಳಿಯ ಬಗ್ಗೆ ಕೇಂದ್ರೀಯ ತನಿಖಾ ದಳ(CBI) ಅಥವಾ ರಾಷ್ಟ್ರೀಯ ತನಿಖಾ ದಳದಂತಹ(NIA) ಸ್ವತಂತ್ರ ಸಂಸ್ಥೆಗಳಿಂದ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ(Election commission) ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

Malda, West Bengal: Protests are ongoing in Sujapur over the removal of names from the SIR list pic.twitter.com/FmYFdwppS7

— IANS (@ians_india) April 1, 2026


ಬುಧವಾರ ಏನಾಗಿತ್ತು?
ಮಾಲ್ಡಾ ಜಿಲ್ಲೆಯಲ್ಲಿ ಏಪ್ರಿಲ್‌ 1 ರಂದು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿದ್ದ ನ್ಯಾಯಾಂಗ ಅಧಿಕಾರಿಗಳ ಮೇಲೆ ದೊಡ್ಡ ಮಟ್ಟದ ದಾಳಿ ನಡೆದಿತ್ತು. ಮತದಾರರ ಪಟ್ಟಿಯಿಂದ ಕೆಲವು ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಕಾರಣಕ್ಕೆ ಸಾವಿರಾರು ಸಂಖ್ಯೆಯಲ್ಲಿದ್ದ ಪ್ರತಿಭಟನಾಕಾರರು ಮಾಲ್ಡಾದ ಇಂಗ್ಲಿಷ್ ಬಜಾರ್‌ನಲ್ಲಿರುವ ಕಚೇರಿಯನ್ನು ಮುತ್ತಿಗೆ ಹಾಕಿದ್ದರು.

ಮೂವರು ಮಹಿಳಾ ಜಡ್ಜ್‌ ಸೇರಿ ಒಟ್ಟು ಏಳು ನ್ಯಾಯಾಧೀಶರನ್ನು ಪ್ರತಿಭಟನಾಕಾರರು ಸುಮಾರು 10 ಗಂಟೆಗಳ ಕಾಲ ಕಚೇರಿಯೊಳಗೆ ಕೂಡಿಹಾಕಿ ಒತ್ತೆಯಾಳಾಗಿ ಇರಿಸಿಕೊಂಡಿದ್ದರು. ಈ ಸಮಯದಲ್ಲಿ ಅಧಿಕಾರಿಗಳಿಗೆ ಆಹಾರ, ನೀರು ಅಥವಾ ವೈದ್ಯಕೀಯ ನೆರವು ಸಿಗದಂತೆ ತಡೆಯಲಾಗಿತ್ತು. ವಿದ್ಯುತ್ ಸಂಪರ್ಕವನ್ನೂ ಕಡಿತಗೊಳಿಸಲಾಗಿತ್ತು ಎಂದು ವರದಿಯಾಗಿದೆ.

ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಲ್ಲದೆ, ಕಚೇರಿಯ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದರು. ಸ್ಥಳೀಯ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ವಿಫಲರಾಗಿದ್ದರು.

ಅಧಿಕಾರಿಗಳನ್ನು ಹೊರಬರಲು ಬಿಡದೆ ಅವರಿಗೆ ಜೀವ ಬೆದರಿಕೆ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಕೋಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ಗೆ ಪತ್ರ ಬರೆದು ಮಧ್ಯಪ್ರವೇಶಿಸುವಂತೆ ವಿನಂತಿಸಿದ್ದರು. ಪತ್ರ ಬರೆದ ಕೂಡಲೇ ಮಧ್ಯರಾತ್ರಿ ಸುಪ್ರೀಂ ಕೋರ್ಟ್‌ ಕೇಂದ್ರ ಸಶಸ್ತ್ರ ಪಡೆಗಳನ್ನು ಸ್ಥಳಕ್ಕೆ ಕಳುಹಿಸುವಂತೆ ಆದೇಶ ನೀಡಿತ್ತು.

ಸುಪ್ರೀಂ ಆದೇಶದ ಬಳಿಕ ಕೇಂದ್ರ ಗೃಹ ಸಚಿವಾಲಯವು ಮಾಲ್ಡಾ ಜಿಲ್ಲೆಯ ಇಂಗ್ಲಿಷ್ ಬಜಾರ್‌ಗೆ ಅರೆಸೇನಾ ಪಡೆಗಳನ್ನು ರವಾನಿಸಿತ್ತು. ಈ ಪಡೆಯ ಸೈನಿಕರು ಸ್ಥಳಕ್ಕೆ ತಲುಪಿ ಪ್ರತಿಭಟನಾಕಾರರನ್ನು ಚದುರಿಸಿ, ಕಚೇರಿಯೊಳಗೆ ಸಿಲುಕಿದ್ದ ಅಧಿಕಾರಿಗಳನ್ನು ಸುರಕ್ಷಿತವಾಗಿ ಹೊರತಂದಿದ್ದರು.

ನ್ಯಾಯಾಧೀಶರ ನಿಯೋಜನೆ ಯಾಕೆ?
ಮತದಾರರ ಪಟ್ಟಿಯಲ್ಲಿನ ದೋಷಗಳು ಮತ್ತು ಆಕ್ಷೇಪಣೆಗಳನ್ನು (Logical Discrepancy claims) ಪರಿಶೀಲಿಸಲು ಸುಪ್ರೀಂ ಕೋರ್ಟ್ ಸುಮಾರು 150 ನ್ಯಾಯಾಂಗ ಅಧಿಕಾರಿಗಳನ್ನು (ಹಾಲಿ ಮತ್ತು ನಿವೃತ್ತ ನ್ಯಾಯಾಧೀಶರು) ನಿಯೋಜಿಸಲು ಸೂಚಿಸಿತ್ತು. ಪಾರದರ್ಶಕತೆ ಕಾಯ್ದುಕೊಳ್ಳಲು ಜಾರ್ಖಂಡ್ ಮತ್ತು ಒಡಿಶಾದಿಂದ ಸುಮಾರು 200 ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು.

TAGGED:election commissionsirSupreme CourtWest Bengalಚುನಾವಣಾ ಆಯೋಗಪಶ್ಚಿಮ ಬಂಗಾಳಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rinku Singh Sunil Narine
Cricket

IPL: ಸೂಪರ್‌ ಓವರ್‌ನಲ್ಲಿ ಮಿಂಚಿದ ನರೈನ್‌, ರಿಂಕು – ಲಕ್ನೋ ವಿರುದ್ಧ ಕೋಲ್ಕತ್ತಾಗೆ ‘ಸೂಪರ್’ ಜಯ

Public TV
By Public TV
4 hours ago
Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
5 hours ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
5 hours ago
RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
6 hours ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
7 hours ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?