ನವದೆಹಲಿ: ಭದ್ರತಾ ಕಾರಣಗಳಿಗಾಗಿ ಮಲಯಾಳಂ ಸುದ್ದಿ ವಾಹಿನಿ ʼಮೀಡಿಯಾ ಒನ್ʼ ಪ್ರಸಾರವನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಜನವರಿ ತಿಂಗಳಲ್ಲಿ ಸುದ್ದಿ ವಾಹಿನಿ ಕಚೇರಿಯನ್ನು ಮುಚ್ಚಲು ಬಲವಂತಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತನ್ನ ಕಾರ್ಯಾಚರಣೆಯನ್ನು ನಡೆಸಲು ಸುದ್ದಿ ವಾಹಿನಿಗೆ ನಿರ್ದೇಶನ ನೀಡಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಒತ್ತಡದಿಂದ ಬಂದಿರುವ ತೀರ್ಪು: ಉಡುಪಿ ವಿದ್ಯಾರ್ಥಿನಿಯರು
ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯಕಾಂತ್, ವಿಕ್ರಮ್ ನಾಥ್ ಅವರಿದ್ದ ಪೀಠವು, ಮೀಡಿಯಾ ಒನ್‌ಗೆ ಸಂಬಂಧಿಸಿದ ಗೃಹ ವ್ಯವಹಾರಗಳ ಸಚಿವಾಲಯದ ಕಡತಗಳನ್ನು ಪರಿಶೀಲಿಸಿದ ನಂತರ ಈ ಆದೇಶ ನೀಡಿತು. ಈ ಸಂಬಂಧ ವಿವರವಾದ ಅಫಿಡವಿಟ್ ಸಲ್ಲಿಸಲು ಕೇಂದ್ರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.
ಹೈಕೋರ್ಟ್ ಆದೇಶದ ವಿರುದ್ಧ ಸುದ್ದಿ ವಾಹಿನಿ ಸಲ್ಲಿಸಿರುವ ಮೇಲ್ಮನವಿಗಳ ಕುರಿತು ಮಾ.26ರೊಳಗೆ ವಿವರವಾದ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಬಾಲಿವುಡ್ ಪಾಪ ತೊಳೆದ ದಿ ಕಾಶ್ಮೀರ್ ಫೈಲ್ಸ್: ಕಂಗನಾ ರಣಾವತ್
ಕೋಮು ಸಾಮರಸ್ಯ ಕೆಡಿಸುವ ವರದಿ ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ 2020ರ ಅವಧಿಯಲ್ಲೂ ಮೀಡಿಯಾ ಒನ್‌ಗೆ ನಿರ್ಬಂಧ ವಿಧಿಸಲಾಗಿತ್ತು. ನಂತರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ಬಂಧವನ್ನು ಹಿಂಪಡೆದಿತ್ತು. ಈಗ ಮತ್ತೆ ಕೇಂದ್ರ ಸರ್ಕಾರ ಸುದ್ದಿ ವಾಹಿನಿ ನಿಷೇಧಿಸಿ ಆದೇಶ ಹೊರಡಿಸಿತ್ತು.