ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (WFI) ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹಟಿ ಹೈಕೋರ್ಟ್‌ನ (Gauhati High Court) ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಎಸ್.ವಿ ಭಟ್ಟಿ ಅವರಿದ್ದ ಪೀಠವು, ಜೂನ್ 25 ರಂದು ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿತು. ಈ ವೇಳೆ ಕೇಂದ್ರ ಕ್ರೀಡಾ ಸಚಿವಾಲಯ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ, ಅಸ್ಸಾಂ ಕುಸ್ತಿ ಅಸೋಸಿಯೇಷನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ – ಶುಕ್ರವಾರ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್
Advertisement
Advertisement
ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಭಾರತ ಕುಸ್ತಿ ಫೆಡರೇಷನ್‌ನ ಚುನಾವಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಕೋರಿ ಅಸ್ಸಾಂ ಕುಸ್ತಿ ಸಂಸ್ಥೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುವಾಹಟಿ ಹೈಕೋರ್ಟ್ ಜು.28 ಕ್ಕೆ ಮುಂದೂಡಿತ್ತು.
Advertisement
Advertisement
ಜು.11 ರಂದು ಡಬ್ಲ್ಯೂಎಫ್‌ಐ ಚುನಾವಣೆ ನಡೆಸಬೇಕಿತ್ತು. ಆದರೆ ಅಸ್ಸಾಂ ಸಂಸ್ಥೆ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಲಾಗಿತ್ತು. ಇದನ್ನೂ ಓದಿ: ಮೋದಿ, ಯೋಗಿಯೇ ಟಾರ್ಗೆಟ್- 26/11ರಂತೆ ಮತ್ತೊಂದು ದಾಳಿಯ ಬೆದರಿಕೆ ಕರೆ
Web Stories