ನವದೆಹಲಿ: ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಬ್ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು, ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಮೊದಲ ಕೆಲಸದ ದಿನವಾದ ನಾಳೆ ಅರ್ಜಿಗಳನ್ನು ಆಲಿಸಲಿದೆ. ಇದನ್ನೂ ಓದಿ: 3,700 ಕೆ.ಜಿ ಸ್ಫೋಟಕ, 10 ಸೆಕೆಂಡ್- 1,200 ಕೋಟಿಯ ದೈತ್ಯ ಅವಳಿ ಕಟ್ಟಡ ಉಡೀಸ್
Advertisement
Advertisement
ಈ ಹಿಂದೆ, ಆಗಿನ ಸಿಜೆಐ ಎನ್.ವಿ.ರಮಣ ನೇತೃತ್ವದ ಪೀಠದ ಮುಂದೆ ಹಲವಾರು ಸಂದರ್ಭಗಳಲ್ಲಿ ತುರ್ತು ವಿಚಾರಣೆಗಾಗಿ ಅರ್ಜಿಗಳನ್ನು ಉಲ್ಲೇಖಿಸಲಾಗಿತ್ತು. ಆದರೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಿರಲಿಲ್ಲ.
Advertisement
ಶಾಲಾ-ಕಾಲೇಜುಗಳ ಏಕರೂಪ ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸಿದ ಕರ್ನಾಟಕ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಹಿಜಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿತ್ತು. ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ರಾಷ್ಟ್ರಕ್ಕಾಗಿ ಖಾದಿ, ಆದ್ರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್ : ಮೋದಿ ವಿರುದ್ಧ ರಾಹುಲ್ ಟೀಕೆ
Advertisement
ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿಯೊಂದರಲ್ಲಿ, ʻಸರ್ಕಾರಿ ಅಧಿಕಾರಿಗಳ ಮಲತಾಯಿ ಧೋರಣೆಯು ವಿದ್ಯಾರ್ಥಿಗಳ ನಂಬಿಕೆಗಳಿಗೆ ಅಡ್ಡಿಪಡಿಸಿದೆ. ಅನಪೇಕ್ಷಿತ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗೆ ಕಾರಣವಾಗಿದೆʼ ಎಂದು ಆರೋಪಿಸಲಾಗಿದೆ.
ಹಿಜಬ್ ಅಥವಾ ಸ್ಕಾರ್ಫ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆ ಎಂದು ಮೇಲ್ಮನವಿಯಲ್ಲಿ ಉಲ್ಲೇಖಿಸಲಾಗಿದೆ.