ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ – ಶುಕ್ರವಾರ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

Public TV
1 Min Read
Rahul Gandhi

ನವದೆಹಲಿ: ಮಾನಹಾನಿ ಪ್ರಕರಣದಲ್ಲಿ (Defamation Case) ಎರಡು ವರ್ಷ ಜೈಲು ಶಿಕ್ಷೆಗೆ ಒಳಪಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (D.Y.Chandrachud) ಹೇಳಿದ್ದಾರೆ.

COURT

ಪ್ರಕರಣವನ್ನು ಶೀಘ್ರ ವಿಚಾರಣೆ ನಡೆಸುವಂತೆ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ರಾಹುಲ್ ಗಾಂಧಿ ಪರ ಮಂಗಳವಾರ ಮನವಿ ಮಾಡಿದರು. ಶುಕ್ರವಾರ ಅಥವಾ ಸೋಮವಾರ ವಿಚಾರಣೆಗೆ ಪಟ್ಟಿ ಮಾಡುವಂತೆ ಅಭಿಷೇಕ್ ಕೋರಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಶುಕ್ರವಾರ ವಿಚಾರಣೆಗೆ ಪಟ್ಟಿ ಮಾಡಲು ಸೂಚನೆ ನೀಡಿದರು. ಇದನ್ನೂ ಓದಿ: ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ – ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎನ್ನುವ ಹೇಳಿಕೆ ಹಿನ್ನೆಲೆ ಮಾನಹಾನಿ ಪ್ರಕರಣದಲ್ಲಿ ಸೂರತ್ ಮ್ಯಾಜಿಸ್ಟ್ರೇಟ್‌ ಕೋರ್ಟ್ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಮಸಾಲೆ ದೋಸೆ ಜೊತೆ ಸಾಂಬಾರ್ ನೀಡದ ರೆಸ್ಟೋರೆಂಟ್‍ಗೆ 3,500 ರೂ. ದಂಡ!

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article