ನವದೆಹಲಿ: ಜಮ್ಮು (Jammu) ಮತ್ತು ಕಾಶ್ಮೀರಕ್ಕೆ (Kashmir) ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮುಂಬರುವ ದಸರಾ ರಜೆಯ (Dasara) ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ (Supreme Court) ಹೇಳಿದೆ.
ಈ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ (Uday Umesh Lalit) ಅವರ ಮುಂದೆ ಪ್ರಸ್ತಾಪಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ದಸರಾ ವಿರಾಮದ ನಂತರ ಅದನ್ನು ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು. ಅಕ್ಟೋಬರ್ 3 ರಿಂದ 10ರವರೆಗೂ ಒಂದು ವಾರದ ದಸರಾ ಹಬ್ಬದ ಹಿನ್ನೆಲೆ ಕೋರ್ಟ್ ರಜೆಯಲ್ಲಿರಲಿದೆ. ಇದನ್ನೂ ಓದಿ: ವಿವಾಹಿತೆಯೊಂದಿಗಿನ ಅಕ್ರಮ ಸಂಬಂಧ ನಿರಾಕರಿಸಿದ್ದಕ್ಕೆ ತಾಯಿಯನ್ನೇ ಕೊಂದ ಮಗ
Advertisement
Advertisement
ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಆಗಸ್ಟ್ 2019ರ ನಿರ್ಧಾರವನ್ನು ಪ್ರಶ್ನಿಸಿ 20ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂಕೋರ್ಟ್ನಲ್ಲಿ ಬಾಕಿ ಉಳಿದಿವೆ. ಈ ವಿಧಿಯನ್ನು ರದ್ದುಪಡಿಸುವ ಮೂಲಕ ಕೇಂದ್ರವು ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದೆ. ತರುವಾಯ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು, ಲಡಾಖ್, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾಗಿವೆ. ಇದನ್ನೂ ಓದಿ: Bigg Boss 9- ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ದಿಢೀರ್ ಅಂತ ರಾಜೇಶ್ ಸಾವು: ಬಿಗ್ ಬಾಸ್ ಮನೆಗೆ ಬರ್ತಾರಾ ನಟ ಸುನೀಲ್?
Advertisement
Advertisement
ಮಾರ್ಚ್ 2020ರಲ್ಲಿ ಸುಪ್ರೀಂಕೋರ್ಟ್ನ 5 ನ್ಯಾಯಾಧೀಶರ ಸಂವಿಧಾನಿಕ ಪೀಠವು 370ನೇ ವಿಧಿಯನ್ನು ಪ್ರಶ್ನಿಸುವ ಅರ್ಜಿಗಳ ಬ್ಯಾಚ್ ಅನ್ನು 7 ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ಉಲ್ಲೇಖಿಸುವ ಅಗತ್ಯವಿಲ್ಲ ಎಂದು ಹೇಳಿತ್ತು. ಕೆಲವು ಅರ್ಜಿದಾರರು ಸುಪ್ರೀಂಕೋರ್ಟ್ನ ಎರಡು ತೀರ್ಪುಗಳ ನಡುವೆ ಸಂಘರ್ಷವಿದೆ ಎಂದು ವಾದಿಸಿ 7 ನ್ಯಾಯಾಧೀಶರ ಪೀಠಕ್ಕೆ ಪ್ರಕರಣ ವರ್ಗಾಯಿಸಲು ಮನವಿ ಮಾಡಲಾಗಿತ್ತು. ಆದರೆ, ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಐವರು ನ್ಯಾಯಾಧೀಶರ ಪೀಠ, ಹಿಂದಿನ ಎರಡು ತೀರ್ಪುಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಪರಿಗಣಿಸಿ ಪ್ರಕರಣವನ್ನು ದೊಡ್ಡ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿತು.