ನವದೆಹಲಿ : ಪೌರತ್ವ ತಿದ್ದುಪಡಿ ಕಾಯಿದೆ ( CAA ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಡಿಸೆಂಬರ್ 6 ರಿಂದ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ತಿಳಿಸಿದ್ದಾರೆ. ಇಂದು ಪ್ರಕರಣದ ವಿಚಾರಣೆ ನಡೆಸಿದ ಅವರ ನೇತೃತ್ವದ ಪೀಠ ಇಬ್ಬರು ನೋಡಲ್ ಸಲಹೆಗಾರರನ್ನು ನೇಮಿಸಿದೆ.
ಪ್ರಕರಣ ಸಂಬಂಧ ಅಸ್ಸಾಂ, ತ್ರಿಪುರ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಿಂದ 232 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳನ್ನು ಒಟ್ಟುಗೂಡಿಸಿ ವಿಚಾರಣೆ ನಡೆಸಲು ತಿರ್ಮಾನಿಸಿರುವ ಕೋರ್ಟ್ ಅರ್ಜಿಗಳ ಸಮನ್ವಯಕ್ಕಾಗಿ ಇಬ್ಬರು ವಕೀಲರನ್ನು ನೋಡಲ್ ಸಲಹೆಗಾರರಾಗಿ ನೇಮಿಸಿದೆ.
Advertisement
Advertisement
ಬಹುದೃಷ್ಟಿ ಕೋನದಿಂದ ಅರ್ಜಿಗಳು ಸಲ್ಲಿಕೆಯಾಗಿದ್ದು, ಎಲ್ಲ ದೃಷ್ಟಿಕೋನಗಳಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲ, ಹೀಗಾಗಿ ಪ್ರಮುಖ ಅಂಶಗಳನ್ನು ಗುರುತಿಸಿ ಅವುಗಳನ್ನು ವಿಚಾರಣೆ ನಡೆಸಲು ಕೋರ್ಟ್ ತಿರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ವಕೀಲರು ನೋಡಲ್ ವಕೀಲರಿಗೆ ತಮ್ಮ ಅರ್ಜಿಗಳ ಮಾಹಿತಿಯನ್ನು ಡಿಜಿಟಲ್ ರೂಪದಲ್ಲಿ ಹಂಚಿಕೊಳ್ಳಲು ಸೂಚಿಸಿದೆ. ಇದನ್ನೂ ಓದಿ: ಭಾರತಕ್ಕೆ ಮುಸ್ಲಿಂ ಪ್ರಧಾನಿ ಆಗ್ಬೇಕು ಅನ್ನೋದು ಹುಚ್ಚು ಕಲ್ಪನೆ: ಬಿ.ಸಿ ಪಾಟೀಲ್
Advertisement
ನಿರ್ದಿಷ್ಟವಾಗಿ ಅಸ್ಸಾಂ ಮತ್ತು ತ್ರಿಪುರಾಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತುವ ಅರ್ಜಿಗಳ ಕುರಿತು, ಎರಡು ವಾರಗಳಲ್ಲಿ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಎರಡು ರಾಜ್ಯಗಳಿಗೆ ನ್ಯಾಯಾಲಯ ಸೂಚಿಸಿದೆ. ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯರಿಗೆ ಎರಡು ಬೆರಳಿನ ಪರೀಕ್ಷೆ – ಸುಪ್ರೀಂಕೋರ್ಟ್ ಅಸಮಾಧಾನ