ನವದೆಹಲಿ: ಸುಪ್ರೀಂಕೋರ್ಟ್‍ನಲ್ಲಿ ಇಂದು ಮೇಕೆದಾಟು ಅಣೆಕಟ್ಟು ವಿಚಾರ ಚರ್ಚೆಗೆ ಬರಲಿದೆ.
Advertisement
ಮೇಕೆದಾಟು ಡ್ಯಾಂಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು, ಡ್ಯಾಂ ನಿರ್ಮಾಣಕ್ಕೆ ಅನುಮತಿ ಕೊಡಲ್ಲ. ಮೇಕೆದಾಟು ಅಣೆಕಟ್ಟು ನಿರ್ಮಾಣ ಬಗ್ಗೆ ನಿರ್ಧರಿಸುವ ಯಾವುದೇ ಅಧಿಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಇಲ್ಲ. ಪ್ರಾಧಿಕಾರ ಸುಪ್ರೀಂಕೋರ್ಟ್ ಕಾರ್ಯ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು. ನೀರು ಹಂಚಿಕೆ ಬಗ್ಗೆ ಪರಿಶೀಲನೆ ಮಾಡಬೇಕೇ ಹೊರತು ಅಣೆಕಟ್ಟು ನಿರ್ಮಾಣ ಮಾಡುವ ಬಗ್ಗೆ ನಿರ್ಧರಿಸುವ ಅಧಿಕಾರ ಇಲ್ಲ. ಹೀಗಾಗಿ, ಸಭೆಯಲ್ಲಿ ಅಣೆಕಟ್ಟು ನಿರ್ಮಾಣದ ಬಗ್ಗೆ ಅಥವಾ ಮೇಕೆದಾಟು ಡಿಪಿಆರ್ ಬಗ್ಗೆ ಚರ್ಚೆ ಮಾಡಬಾರದು ಎಂದು ಹೇಳಿದೆ. ಇದನ್ನೂ ಓದಿ: ಉಗ್ರರ ಸುರಕ್ಷಿತ ಅಡಗುದಾಣವಾಗ್ತಿದ್ಯಾ ಬೆಂಗಳೂರು? – ಶಂಕಿತ ಲಷ್ಕರ್ ಉಗ್ರನ ವಶ
Advertisement
Advertisement
ಕಳೆದ 9 ವರ್ಷದಲ್ಲಿ 5 ವರ್ಷ ಕರ್ನಾಟಕ ಸಮರ್ಪಕ ನೀರು ಹರಿಸದೇ ಮೋಸ ಮಾಡಿದೆ. ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ಕೆಳ ಹಂತದ ರಾಜ್ಯಗಳಿಗೆ ತೊಂದರೆಯಾಗಲಿದೆ ಅಂತ ಅಫಿಡೆವಿಟ್‍ನಲ್ಲಿ ಉಲ್ಲೇಖಿಸಿದೆ. ಕರ್ನಾಟಕವೂ ಈ ಬಗ್ಗೆ ಉತ್ತರಿಸಿದ್ದು ಮೇಕೆದಾಟು ಯೋಜನೆ ಕರ್ನಾಟಕದ ಯೋಜನೆಯಾಗಿದ್ದು ತಮಿಳುನಾಡು ಅನುಮತಿ ಅಗತ್ಯ ಇಲ್ಲ. ಇದು ಕುಡಿಯುವ ನೀರು ಮತ್ತು ಹೈಡ್ರೋ ಪವರ್ ಪ್ರಾಜೆಕ್ಟ್ ಯೋಜನೆ. ಇದರಿಂದ ತಮಿಳುನಾಡಿಗೆ ನೀರಿನ ಕೊರತೆಯಾಗುವುದಿಲ್ಲ. ನೀರಿನ ಕೊರತೆಯ ಬಗ್ಗೆ ಪ್ರಾಧಿಕಾರ ಸಭೆಯಲ್ಲಿ ಚರ್ಚಿಸಬಹುದು ಎಂದು ತಿಳಿಸಿದೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಮೇಕೆದಾಟು ನಿರ್ಮಾಣಕ್ಕೆ ಅನುಮತಿ ನೀಡಲ್ಲ: ತಮಿಳುನಾಡು ಸರ್ಕಾರ