ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಅರ್ಜಿ ವಿಚಾರಣೆ ನಡೆಯಲಿದೆ.
ನ್ಯಾ.ವಿಕ್ರಮನಾಥ್ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಬಾಕಿ ಉಳಿಸಿಕೊಂಡಿರುವ ನೀರು ಹರಿಸಲು ನಿರ್ದೇಶಿಸಲು ಮನವಿ ಮಾಡಿ ಸುಪ್ರೀಂಗೆ ತಮಿಳುನಾಡು (Tamil Nadu) ಅರ್ಜಿ ಸಲ್ಲಿಸಿತ್ತು. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ: ಡಿ.ಕೆ ಶಿವಕುಮಾರ್
CWMA ಆದೇಶ ಪಾಲಿಸಲು ಸೂಚಿಸುವಂತೆ ತಮಿಳುನಾಡು ಕೋರಿದೆ. ತಮಿಳುನಾಡು ಅರ್ಜಿಗೆ ಈಗಾಗಲೇ ಕರ್ನಾಟಕ (Karnataka) ಪ್ರತಿಕ್ರಿಯೆ ಸಲ್ಲಿಸಿದೆ. ರಾಜ್ಯದಲ್ಲಿ ಮುಂಗಾರು ಮಳೆಯೂ ಅನಿಶ್ಚಿತತೆಯಿಂದ ಕೂಡಿದೆ. ಈಗ ನೀರು ಹರಿಸಿದರೆ ಭವಿಷ್ಯದಲ್ಲಿ ಕೊರತೆ ಉಂಟಾಗಬಹುದು. ಜಲಾಶಯಗಳು ಭರ್ತಿಯಾಗಲಿ ಅಂತ ಕರ್ನಾಟಕ ಪ್ರತಿಕ್ರಿಯೆಯಲ್ಲಿ ತಿಳಿಸಿದೆ. ಪರ-ವಿರೋಧ ವಾದವನ್ನು ಸುಪ್ರೀಂ ಕೋರ್ಟ್ ಆಲಿಸಲಿದೆ.
ಕೆಆರ್‌ಎಸ್ ಮತ್ತು ಕಬಿನಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮತ್ತು ಕರ್ನಾಟಕದ ಅಣೆಕಟ್ಟುಗಳಿಗೆ ಒಳಹರಿವು ಹೆಚ್ಚಾದ ಕಾರಣ, ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ನಿರ್ದೇಶನದಂತೆ ಕರ್ನಾಟಕವು 15 ದಿನಗಳವರೆಗೆ 3,500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲು ವಿಫಲವಾಗಿದೆ ಎಂದು ತಮಿಳುನಾಡು ಅರ್ಜಿಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಹರಿದ ಕಾವೇರಿ ನೀರು

