ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬೆಳಗ್ಗೆ 10.30ಕ್ಕೆ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ.
ಕಾವೇರಿ ನಾಯಾಧಿಕರಣದ ಐತೀರ್ಪು(ನ್ಯಾಯಾಲಯಗಳು ವಿಚಾರಣೆ ನಡೆಸಿ ತೀರ್ಪು ನೀಡಿದರೆ, ನ್ಯಾಯಮಂಡಳಿಗಳು ವಿಚಾರಣೆ ನಡೆಸಿ ನೀಡುವ ಮಧ್ಯಂತರ/ಅಂತಿಮ ತೀರ್ಪಿಗೆ ಐತೀರ್ಪು ಎಂದು ಕರೆಯಲಾಗುತ್ತದೆ) ಪ್ರಶ್ನಿಸಿ ಕರ್ನಾಟಕ ಮತ್ತು ತಮಿಳುನಾಡು ಸುಪ್ರೀಂ ಮೊರೆ ಹೋಗಿತ್ತು. ಈ ವಿಶೇಷ ಮೇಲ್ಮನವಿಯ ಅರ್ಜಿಯ ವಿಚಾರಣೆ 2016ರ ಅಕ್ಟೋಬರ್ 18ರಿಂದ ಆರಂಭವಾಗಿ 2017ರ ಸೆಪ್ಟೆಂಬರ್ 20ಕ್ಕೆ ವಿಚಾರಣೆ ಅಂತ್ಯವಾಗಿತ್ತು. ಸುಪ್ರೀಂ ಈ ಅರ್ಜಿಯ ವಿಚಾರಣೆಗಾಗಿ ನ್ಯಾ.ದೀಪಕ್ ಮಿಶ್ರಾ, ನ್ಯಾ. ಅಮಿತ್ ರಾಯ್, ಎ.ಎಂ ಖಾನ್ವಿಲ್ಕಾರ್ ಅವರ ತ್ರಿಸದಸ್ಯ ಪೀಠ ರಚಿಸಿತ್ತು.
Advertisement
ಶುಕ್ರವಾರವೇ ಯಾಕೆ?
ಫೆ.24 ರಿಂದ ಮಾರ್ಚ್ 4 ವರೆಗೆ ಕೋರ್ಟ್ ಗೆ ರಜೆ ಇರಲಿದೆ. ಮಾರ್ಚ್ 1ರಂದು ಈ ಅರ್ಜಿಯ ವಿಚಾರಣೆ ನಡೆಸಿದ್ದ ಪೀಠದಲ್ಲಿದ್ದ ನ್ಯಾ. ಅಮಿತಾವ್ ರಾಯ್ ನಿವೃತ್ತಿಯಾಗಲಿದ್ದಾರೆ. ಫೆ.23ಕ್ಕೆ ತೀರ್ಪು ಪ್ರಕಟಿಸಿದರೆ ತೀರ್ಪಿನಲ್ಲಿ ಅಸಮಾಧಾನ ಇದ್ದರೆ ಪರಿಶೀಲನಾ ಅರ್ಜಿ ಹಾಕಲು ಸಮಸ್ಯೆ ಆಗಲಿರುವುದರಿಂದ ನಾಳೆ ತೀರ್ಪು ಪ್ರಕಟವಾಗಲಿದೆ.
Advertisement
Advertisement
ಅಂತಿಮ ಐತೀರ್ಪು ಪ್ರಕಾರ ಯಾರಿಗೆ ಎಷ್ಟು ನೀರು?
ನ್ಯಾ. ಎನ್.ಪಿ.ಸಿಂಗ್, ನ್ಯಾ. ಸುಧೀರ್ ನಾರಿಯನ್, ನ್ಯಾ. ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪು ನೀಡಿತು. ಈ ಐತೀರ್ಪಿನ ಅನ್ವಯ ಕಾವೇರಿ ಕಣಿವೆಯಲ್ಲಿ 740 ಟಿಎಂಸಿ ನೀರಿದೆ ಎಂದು ಲೆಕ್ಕಹಾಕಲಾಯಿತು. ಕರ್ನಾಟಕಕ್ಕೆ 270 ಟಿಎಂಸಿ, ತಮಿಳುನಾಡಿಗೆ 419 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪುದುಚೇರಿಗೆ 10,ಪರಿಸರ ಸಂರಕ್ಷಣೆಗೆ 10 ಟಿಎಂಸಿ, ಸಮುದ್ರ ಸೇರುವ ನೀರು 4 ಟಿಎಂಸಿ ಟಿಎಂಸಿ ನೀರನ್ನು ಹಂಚಲಾಯಿತು. ಇದರ ಜೊತೆ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಆದೇಶಿಸಿತು.
Advertisement
ಯಾವ ತಿಂಗಳಿನಲ್ಲಿ ತಮಿಳುನಾಡಿಗೆ ಎಷ್ಟು ಟಿಎಂಸಿ ನೀರು?
ಜೂನ್ 10, ಜುಲೈ 34, ಅಗಸ್ಟ್ 50, ಸೆಪ್ಟೆಂಬರ್ 40, ಅಕ್ಟೋಬರ್ 22, ನವೆಂಬರ್ 15, ಡಿಸೆಂಬರ್ 8, ಜನವರಿ 3, ಫೆಬ್ರವರಿ 2.5, ಮಾರ್ಚ್ 2.5, ಏಪ್ರಿಲ್ 2.5, ಮೇ 2.5 ಸೇರಿ ಒಟ್ಟು 192 ಟಿಎಂಸಿ ನೀರನ್ನು ಕನಾಟಕ ಪ್ರತಿವರ್ಷ ತಮಿಳುನಾಡಿಗೆ ಹರಿಸಬೇಕು.
2013ರಲ್ಲಿ ಅಧಿಸೂಚನೆ ಪ್ರಕಟ
ಐತೀರ್ಪಿನ ಆದೇಶದ ಅನ್ವಯ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸಬೇಕಿತ್ತು. ಆದರೆ ತೀರ್ಪು ಬಂದು 5 ವರ್ಷ ಕಳೆದರೂ ನಿರ್ವಹಣಾ ಮಂಡಳಿಯನ್ನು ರಚಿಸದ್ದಕ್ಕೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ ಫೆ.20ರ ಒಳಗಡೆ ಅಂತಿಮ ಆದೇಶವನ್ನು ಜಾರಿಗೊಳಿಸಿ ಅಧಿಸೂಚನೆ ಹೊರಡಿಸಬೇಕೆಂದು 2013ರ ಫೆ.4ರಂದು ಖಡಕ್ ಆದೇಶವನ್ನು ಹೊರಡಿಸಿತು. ಈ ಆದೇಶದ ಅನ್ವಯ ಅಂತಿಮವಾಗಿ ಕೇಂದ್ರ ಸರ್ಕಾರ ಫೆ.19ರಂದು ಗೆಜೆಟ್ ಅಧಿಸೂಚನೆ ಹೊರಡಿಸಿತು.