ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ (Supreme Court) ದೆಹಲಿಯ ಆಪ್ ಸರ್ಕಾರಕ್ಕೆ (AAP govt) ಹಿನ್ನಡೆಯಾಗಿದೆ. ಲೆಫ್ಟಿನೆಂಟ್ ಗವರ್ನರ್ (Delhi Lieutenant Governor) ಅವರು ಸರ್ಕಾರದ ಒಪ್ಪಿಗೆಯಿಲ್ಲದೇ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ಗೆ (MCD) ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರವನ್ನು ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆಯಿಂದ ಅಧಿಕಾರ ಬಂದಿದೆ. ಆದ್ದರಿಂದ ಲೆಫ್ಟಿನೆಂಟ್ ಗವರ್ನರ್ ದೆಹಲಿ ಸರ್ಕಾರದ ಸಲಹೆಯನ್ನು ಅನುಸರಿಸುವ ಅಗತ್ಯವಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ. ಇದನ್ನೂ ಓದಿ: 1 ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆ – ಈಗ ಇನ್ಸ್‌ಪೆಕ್ಟರ್ ನೇಣಿಗೆ ಶರಣು
ಲೆಫ್ಟಿನೆಂಟ್ ಗವರ್ನರ್ ಅವರು 10 ಸದಸ್ಯರನ್ನು ಎಮ್‌ಸಿಡಿಗೆ ನಾಮನಿರ್ದೇಶನ ಮಾಡಿದ ಅಧಿಸೂಚನೆಗಳನ್ನು ರದ್ದುಗೊಳಿಸುವಂತೆ ಕೋರಿ ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠ ತನ್ನ ತೀರ್ಪನ್ನು ಪ್ರಕಟಿಸಿತು.
ದೆಹಲಿ ಲೆಫ್ಟಿನೆಂಟ್ ಗವರ್ನರ್‌ನಲ್ಲಿ ಅಧಿಕಾರ ಲಾಟರಿ ಎಂದು ಸೂಚಿಸುವುದು ತಪ್ಪಾಗಿದೆ. ಇದು ಸಂಸತ್ತು ಮಾಡಿದ ಕಾನೂನು, ಇದು ಲೆಫ್ಟಿನೆಂಟ್ ಗವರ್ನರ್ ಅವರು ಚಲಾಯಿಸುವ ವಿವೇಚನೆಯನ್ನು ಪೂರೈಸುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಸರ್ಕಾರದಿಂದ ಉದ್ಯೋಗ: ಪರಮೇಶ್ವರ್
ಆರ್ಟಿಕಲ್ 239 ರ ವಿನಾಯಿತಿಯ ಅಡಿಯಲ್ಲಿ ಬರುತ್ತದೆ. 1993 ರ ಎಂಸಿಡಿ ಕಾಯ್ದೆ ಲೆಫ್ಟಿನೆಂಟ್ ಗವರ್ನರ್‌ಗೆ ನಾಮನಿರ್ದೇಶನ ಮಾಡುವ ಅಧಿಕಾರವನ್ನು ಮೊದಲು ನೀಡಿತು ಎಂದು ನ್ಯಾಯಾಲಯ ಹೇಳಿದೆ.