ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ (Reservation) ಕಲ್ಪಿಸಿ ಸಂವಿಧಾನಕ್ಕೆ ಮಾಡಲಾದ 103ನೇ ತಿದ್ದುಪಡಿಯು ಸಂವಿಧಾನ ಬದ್ಧವಾಗಿದೆ (103rd Constitutional Amendment) ಎಂದು ಸುಪ್ರೀಂಕೋರ್ಟ್ ಹೇಳಿದೆ. ಮುಖ್ಯ ನ್ಯಾ. ಯು.ಯು ಲಲಿತ್ (CJI Lalit) ನೇತೃತ್ವದ ಸಾಂವಿಧಾನಿಕ ಪೀಠ 3:2 (Majority) ಅಂತರದಲ್ಲಿ ಈ ತೀರ್ಪು ಪ್ರಕಟಿಸಿದೆ.
Advertisement
ಐವರು ನ್ಯಾಯಮೂರ್ತಿಗಳ ಪೈಕಿ ಮೂವರು ತಿದ್ದುಪಡಿಯ ಸಿಂಧುತ್ವವನ್ನು ಎತ್ತಿಹಿಡಿದಿದ್ದಾರೆ. ಇಬ್ಬರು ನ್ಯಾಯಮೂರ್ತಿಗಳು ಮಾತ್ರ ಭಿನ್ನಮತದ ತೀರ್ಪು ನೀಡಿದ್ದಾರೆ. ನ್ಯಾಯಮೂರ್ತಿ ದೀನೇಶ್ ಮಹೇಶ್ವರಿ, ನ್ಯಾ. ಬೇಲಾ ತ್ರಿವೇದಿ, ನ್ಯಾ ಜೆ.ಬಿ ಪರ್ದಿವಾಲಾ ಆರ್ಥಿಕ ಹಿಂದುಳಿದ ವರ್ಗ (EWS) ಪರವಾಗಿ ಆದೇಶ ನೀಡಿದರೆ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್, ನ್ಯಾ ರವೀಂದ್ರ ಭಟ್ ವಿರುದ್ಧವಾಗಿ ಆದೇಶ ನೀಡಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್ ಪ್ರತಿಮೆ ಧ್ವಂಸ – ಮಹಿಳೆಯರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್
Advertisement
Advertisement
103ನೇ ಸಾಂವಿಧಾನಿಕ ತಿದ್ದುಪಡಿಯನ್ನು ಎತ್ತಿಹಿಡಿದ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ, ಇದು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ, ಏಕೆಂದರೆ ಇದು ಆರ್ಥಿಕ ಮಾನದಂಡಗಳನ್ನು ಆಧರಿಸಿದೆ, EWS ಕೋಟಾಕ್ಕೆ ವಿಶೇಷ ನಿಬಂಧನೆಯನ್ನು ರೂಪಿಸುವ ರಾಜ್ಯವು ಮೂಲಭೂತ ರಚನೆಯನ್ನು ಉಲ್ಲಂಘಿಸುವುದಿಲ್ಲ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.
Advertisement
ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರು ಪ್ರತ್ಯೇಕ ತೀರ್ಪಿನ ಮೂಲಕ ನ್ಯಾಯಮೂರ್ತಿ ಮಹೇಶ್ವರಿ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ (SC/ST) ಹೊರತುಪಡಿಸಿ ಇತರರಿಗೆ ವಿಶೇಷ ಅವಕಾಶ ಕಲ್ಪಿಸಲು ರಾಜ್ಯಕ್ಕೆ ಅನುವು ಮಾಡಿಕೊಡುವ ತಿದ್ದುಪಡಿಯನ್ನು ಸಂಸತ್ತಿನ ದೃಢವಾದ ಕ್ರಮವೆಂದು ಪರಿಗಣಿಸಬೇಕು ಎಂದು ಅವರು ತೀರ್ಪಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಗಾಂಧಿ ಕುಟುಂಬಕ್ಕೆ ಸದ್ಯಕಿಲ್ಲ ಮುಕ್ತಿ – ರಾಹುಲ್, ಸೋನಿಯಾಗೆ ಮತ್ತೆ ED ಸಮನ್ಸ್?
ನ್ಯಾಯಮೂರ್ತಿ ಜೆಬಿ ಪರ್ದಿವಾಲಾ, ಅನಿರ್ದಿಷ್ಟಾವಧಿಗೆ ಮೀಸಲಾತಿಯ ಮುಂದುವರಿಕೆಗೆ ಅಂತ್ಯ ಹಾಡುವ ಬಗ್ಗೆ ಪ್ರಸ್ತಾಪಿಸಿದರು. ಇಂದಿನ ಕಾಲದಲ್ಲಿ ಪ್ರಸ್ತುತವಾಗುವಂತೆ ಮೀಸಲಾತಿ ಮರುಪರಿಶೀಲಿಸುವ ಅಗತ್ಯವಿದೆ. ಮೀಸಲಾತಿ ಅನಿರ್ದಿಷ್ಟ ಕಾಲಕ್ಕೆ ಮುಂದುವರಿಯಬಾರದು. ಅದು ಪಟ್ಟಭದ್ರ ಹಿತಾಸಕ್ತಿಯಾಗುತ್ತದೆ ಎಂದು ಅವರು ಹೇಳಿ EWS ಪರ ಆದೇಶ ನೀಡಿದರು.
ಅಲ್ಪಸಂಖ್ಯಾತರ ದೃಷ್ಟಿಯಿಂದ ಇಡಬ್ಲ್ಯೂಎಸ್ ಕೋಟಾಕ್ಕೆ ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಅಸಮ್ಮತಿ ವ್ಯಕ್ತಪಡಿಸಿದ್ದರು. ಈ ತಿದ್ದುಪಡಿಯು ಸಾಮಾಜಿಕ ಮತ್ತು ಹಿಂದುಳಿದ ವರ್ಗದ ಪ್ರಯೋಜನವನ್ನು ಪಡೆಯುವವರು, ಎರಡು ಪ್ರಯೋಜನಗಳನ್ನು ನೀಡುವ ಈ ತಿದ್ದುಪಡಿಯು ತಪ್ಪಾಗಿದೆ. ಈ ತಿದ್ದುಪಡಿಯು ಸಾಂವಿಧಾನಿಕವಾಗಿ ಅಸಮರ್ಥನೀಯವಾಗಿದೆ, ಆದಾಗ್ಯೂ SC, ST, OBC ಯಂತಹ ವರ್ಗಗಳನ್ನು ಹೊರತುಪಡಿಸಿ ಸಂವಿಧಾನಾತ್ಮಕವಾಗಿ ಅನುಮತಿಸಲಾಗುವುದಿಲ್ಲ ಎಂದು ತೀರ್ಪು ನೀಡಿದರು. ನ್ಯಾಯಮೂರ್ತಿ ಭಟ್ ಅವರ ಅಭಿಪ್ರಾಯಕ್ಕೆ ಸಿಜೆಐ ಲಲಿತ್ ಸಹಮತ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರವು 2019ರಲ್ಲಿ ಸಂವಿಧಾನಕ್ಕೆ 103ನೇ ತಿದ್ದುಪಡಿ ತಂದಿತ್ತು. ಆ ಮೂಲಕ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿಯನ್ನು ಜಾರಿಗೆ ತಂದಿತ್ತು. ಇದು ಸಂವಿಧಾನಬಾಹಿರ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧ ಎಂದು ಸುಪ್ರೀಂಕೋರ್ಟ್‍ಗೆ ಹಲವರು ಅರ್ಜಿ ಸಲ್ಲಿಸಿದ್ದರು.