– ಕೊಲೆ ಮಾಡಿಲ್ವಲ್ಲಾ ಎಂದ ಸುಪ್ರೀಂ ಕೋರ್ಟ್ ನ್ಯಾ. ಬಿ.ವಿ.ನಾಗರತ್ನ
ನವದೆಹಲಿ: 2022ರ ಐಎಎಸ್ ಹುದ್ದೆಗೆ ಅರ್ಹತೆ ಪಡೆಯಲು ನಕಲಿ ದಾಖಲೆಗಳನ್ನು ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿವಾದಿತ ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್‌ಗೆ (Puja Khedkar) ಸುಪ್ರೀಂ ಕೋರ್ಟ್ (Supreme Court) ನಿರೀಕ್ಷಣಾ ಜಾಮೀನು ಮಂಜೂರು (Anticipatory bail) ಮಾಡಿದೆ.
2022ರ ನಾಗರಿಕ ಸೇವೆಗಳ ಪ್ರವೇಶ ಪರೀಕ್ಷೆಗೆ ಅರ್ಹತೆ ಪಡೆಯಲು ದಾಖಲೆಗಳನ್ನು ನಕಲಿ ಮಾಡಿ ಮತ್ತು ಒಬಿಸಿ ಕೋಟಾವನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಬುಧವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಪೂಜಾ ಖೇಡ್ಕರ್ ಮಾಜಿ ಐಎಎಸ್ ತರಬೇತಿ ಅಧಿಕಾರಿ, ಆಕೆ ಮಾದಕವಸ್ತು ಅಥವಾ ಭಯೋತ್ಪಾದನೆ ಕೇಸ್‌ನಲ್ಲಿ ಸಿಲುಕಿಕೊಂಡಿಲ್ಲ. ಅವರಿಗೆ ಹೈಕೋರ್ಟ್ ಜಾಮೀನು ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದೆ.ಇದನ್ನೂ ಓದಿ: 50ಕ್ಕೂ ಹೆಚ್ಚು ಕೊಲೆ ಮಾಡಿ ಪರಾರಿಯಾಗಿದ್ದ ಸಿರಿಯಲ್ ಕಿಲ್ಲರ್ ʻಡಾಕ್ಟರ್ ಡೆತ್ʼ ಅರೆಸ್ಟ್!
ಆದರೆ ಸುಪ್ರೀಂ ಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನನ್ನು ದೆಹಲಿ ಪೊಲೀಸರು ತೀವ್ರವಾಗಿ ವಿರೋಧಿಸಿದ್ದು, ಆರೋಪಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ನೀವು ತನಿಖೆಯನ್ನು ಪೂರ್ಣಗೊಳಿಸಿ, ಆರೋಪಿ ಈ ಪ್ರಕರಣದಿಂದಾಗಿ ಎಲ್ಲವನ್ನೂ ಕಳೆದುಕೊಂಡಿದ್ದಾಳೆ. ಆಕೆಗೆ ಎಲ್ಲಿಯೂ ಕೆಲಸ ಸಿಗುವುದಿಲ್ಲ. ಆದರೆ, ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಹೈಕೋರ್ಟ್ ಅರ್ಜಿದಾರರಿಗೆ ಜಾಮೀನು ನೀಡಬೇಕಾಗಿದ್ದ ಸೂಕ್ತ ಪ್ರಕರಣ ಇದು ಎಂದು ತಿಳಿಸಿತು.
ಏನಿದು ಪ್ರಕರಣ?
ಕೇಂದ್ರ ಲೋಕಸೇವಾ ಆಯೋಗದ (UPSC) ಪರೀಕ್ಷೆ ಬರೆದಿದ್ದ ಖೇಡ್ಕರ್, ತಮ್ಮ ಕುಟುಂಬದ ಆದಾಯದ ಸ್ಥಿತಿ ಮತ್ತು ಇತರ ವಿವರಗಳನ್ನು ಸುಳ್ಳು ಮತ್ತು ತಪ್ಪಾಗಿ ನೀಡಿದ ಹಿನ್ನೆಲೆ ಆಕೆಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ದಾಖಲೆಗಳನ್ನು ನಕಲಿ ಮಾಡಿದ ಆರೋಪದ ಮೇಲೆ ಯುಪಿಎಸ್‌ಸಿ ಅವರ ಆಯ್ಕೆಯನ್ನು ರದ್ದುಗೊಳಿಸಿತ್ತು. ಇನ್ಮುಂದೆ ಆಕೆಗೆ ಯುಪಿಎಸ್‌ಸಿ ಪರೀಕ್ಷೆಗೆ ಹಾಜರಾಗದಂತೆ ನಿರ್ಬಂಧ ವಿಧಿಸಿತು. ಒಂದು ತಿಂಗಳ ಬಳಿಕ ಕೇಂದ್ರ ಸರ್ಕಾರ ಆಕೆಯನ್ನು ಕರ್ತವ್ಯದಿಂದ ವಜಾ ಮಾಡಿತ್ತು.ಇದನ್ನೂ ಓದಿ: ಸರ್ಕಾರಕ್ಕೆ 2 ವರ್ಷ – ಸಿಎಂಗೆ `ದಿವಾಳಿ ಮಾಡೆಲ್ ಆಫ್ ಕರ್ನಾಟಕ’ ಬಿರುದು ಕೊಟ್ಟ ಬಿಜೆಪಿ