ನವದೆಹಲಿ: ಸುಪ್ರೀಂ ಕೋರ್ಟ್‌ನ (Supreme Court) ಯೂಟ್ಯೂಬ್ ಚಾನೆಲ್ ಹ್ಯಾಕ್ ಆಗಿದೆ. ಯುಎಸ್ ಮೂಲದ ಕಂಪನಿ ರಿಪ್ಪಲ್ ಲ್ಯಾಬ್ಸ್ ಅಭಿವೃದ್ಧಿಪಡಿಸಿದ ಕ್ರಿಪ್ಟೋಕರೆನ್ಸಿಯನ್ನು ಪ್ರಚಾರ ಮಾಡುವ ವೀಡಿಯೋಗಳು ಚಾನೆಲ್‌ನಲ್ಲಿ ಬರುತ್ತಿವೆ.
‘ಬ್ರ್ಯಾಡ್ ಗಾರ್ಲಿಂಗ್‌ಹೌಸ್: ರಿಪ್ಲೆ ರೆಸ್ಪೋಂಡ್ ಟು ದಿ SEC’s 2 ಮಿಲಿಯನ್ ಡಾಲರ್ ಫೈನ್! XRP PRICE PREDICTION’ ಶೀರ್ಷಿಕೆಯೊಂದಿಗೆ ಖಾಲಿ ವೀಡಿಯೋ ಪ್ರಸ್ತುತ ಹ್ಯಾಕ್ ಮಾಡಿದ ಚಾನಲ್‌ನಲ್ಲಿ ಲೈವ್ ಆಗಿದೆ. ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಬೆರೆಸಿರುವುದು ಸ್ಪಷ್ಟವಾಗಿದೆ: ರಾಮಜನ್ಮಭೂಮಿ ಪ್ರಧಾನ ಅರ್ಚಕ
Advertisement
Advertisement
ಸಾಂವಿಧಾನಿಕ ಪೀಠಗಳ ಮುಂದೆ ಪಟ್ಟಿ ಮಾಡಲಾದ ಪ್ರಕರಣಗಳು ಮತ್ತು ಸಾರ್ವಜನಿಕ ಹಿತಾಸಕ್ತಿ ಒಳಗೊಂಡಿರುವ ವಿಷಯಗಳ ನೇರ ವಿಚಾರಣೆಗಳನ್ನು ಸ್ಟ್ರೀಮ್ ಮಾಡಲು ಸುಪ್ರೀಂ ಕೋರ್ಟ್ YouTube ಅನ್ನು ಬಳಸುತ್ತಿದೆ.