ನವದೆಹಲಿ: ಶಬರಿಮಲೆ ಜೊತೆಗೆ ಇಂದು ಮತ್ತೊಂದು ಮಹತ್ವದ ತೀರ್ಪು ಹೊರಬೀಳಲಿದೆ.
ರಫೇಲ್ ಡೀಲ್ ಸಂಬಂಧ ಮೋದಿ ಸರ್ಕಾರಕ್ಕೆ ಕ್ಲೀನ್‍ಚಿಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ.
Advertisement
ಕೇಂದ್ರದ ಮಾಜಿ ಸಚಿವರಾದ ಯಶ್ವಂತ್ ಸಿನ್ಹಾ, ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಗಳ ಸಂಬಂಧ ತೀರ್ಪು ಹೊರಬೀಳಲಿದೆ. ಇದೇ ವರ್ಷದ ಮೇ 10 ರಂದು ವಿಚಾರಣೆ ಮುಗಿಸಿದ್ದ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇದನ್ನೂ ಓದಿ: ಅಯ್ಯಪ್ಪನ ಸನ್ನಿಧಿಗೆ ಮಹಿಳೆಯರಿಗೆ ಪ್ರವೇಶವೋ, ನಿಷೇಧವೋ – ಸುಪ್ರೀಂನಲ್ಲಿ ಇಂದು ಮಹತ್ವದ ತೀರ್ಪು
Advertisement
Advertisement
ಇದರ ಜೊತೆಗೆ ರಾಹುಲ್ ಗಾಂಧಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ತೀರ್ಪು ಕೂಡ ಹೊರಬೀಳುವ ಸಂಭವ ಇದೆ. ಚೌಕಿದಾರ್ ಚೋರ್ ಹೈ ಎಂಬ ರಾಹುಲ್ ಗಾಂಧಿ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿತ್ತು. ಕೋರ್ಟ್ ತೀರ್ಪನ್ನು ತಪ್ಪಾಗಿ ಅರ್ಥೈಸಿಕೊಂಡು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಮೀನಾಕ್ಷಿ ಲೇಖಿ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ರಾಹುಲ್ ಗಾಂಧಿ ಕ್ಷಮೆ ಕೂಡ ಕೇಳಿದ್ದರು. ಇದನ್ನೂ ಓದಿ: ರಫೇಲ್ ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಅಸ್ತು
Advertisement
ಏನಿದು ಪ್ರಕರಣ?:
ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಂ.ಎಲ್ ಶರ್ಮಾ, ವಿನೀತಾ ದಾಂಡ, ಆಪ್ ನಾಯಕ ಸಂಜಯ್ ಸಿಂಗ್ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ಹಾ, ಅರುಣ್ ಶೌರಿ ಹಾಗೂ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು. ರಫೇಲ್ ಒಪ್ಪಂದವನ್ನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ವಕೀಲರು ಆಗ್ರಹಿಸಿದ್ದರು. ಈ ಅರ್ಜಿಗಳನ್ನು ಒಟ್ಟಾಗಿಸಿದ್ದ ಮುಖ್ಯ.ನ್ಯಾ ರಂಜನ್ ಗೋಗಯ್ ನೇತೃತ್ವದ ನ್ಯಾ. ಎಸ್‍ಕೆ ಕೌಲ್, ನ್ಯಾ. ಕೆಎಂ ಜೋಸೆಫ್ ಅವರಿದ್ದ ತ್ರಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿತ್ತು.
2018ರ ನವೆಂಬರ್ 14 ರಂದು ವಿಚಾರಣೆ ಅಂತ್ಯಗೊಳಿಸಿದ್ದ ಸುಪ್ರೀಂಕೋರ್ಟ್ ಡಿಸೆಂಬರ್ 14ರಂದು ತೀರ್ಪು ಪ್ರಕಟಿಸಿ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತ್ತು. ಆ ಬಳಿಕ ಯಶವಂತ್ ಸಿನ್ಹಾ, ಅರುಣ್ ಶೌರಿ, ವಕೀಲ ಪ್ರಶಾಂತ್ ಭೂಷಣ್ ಅವರು 21 ಫೆಬ್ರವರಿ 2019ರಂದು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಸುಪ್ರೀಂ ಕೋರ್ಟ್ 10 ಮೇ 2019ರಂದು ಮೇಲ್ಮನವಿ ಅರ್ಜಿಯ ತೀರ್ಪು ಕಾಯ್ದಿರಿಸಿತ್ತು. ಇದನ್ನೂ ಓದಿ: ರಫೇಲ್ ತೀರ್ಪಿನಲ್ಲಿ ಸಿಎಜಿ ಉಲ್ಲೇಖ: ತಿದ್ದುಪಡಿಗಾಗಿ ಕೇಂದ್ರದಿಂದ ಅಫಿಡವಿಟ್