ಬೆಳಗಾವಿ: ಮಾಜಿ ಪ್ರಧಾನಿ ದೇವೇಗೌಡರ ಸೊಸೆ ಭವಾನಿ ರೇವಣ್ಣ (Bhavani Revanna) ಅವರ ಕಾರು ಹಾಗೂ ಬೈಕ್ ಒಂದರ ನಡುವೆ ಡಿಕ್ಕಿ ಸಂಭವಿಸಿದಾಗ ಭವಾನಿ ರೇವಣ್ಣ ಅಕ್ಷಮ್ಯ ಪದಗಳನ್ನು ಬಳಸಿದ್ದಕ್ಕೆ ಪುತ್ರ ಸೂರಜ್ ರೇವಣ್ಣ ಕ್ಷಮೆಯಾಚಿಸಿದ್ದಾರೆ.
ಭಾನುವಾರ ಮೈಸೂರಿನಲ್ಲಿ ಭವಾನಿ ರೇವಣ್ಣ ಅವರ ಕಾರು ಹಾಗೂ ಬೈಕ್ ಒಂದರ ನಡುವೆ ಡಿಕ್ಕಿ ಸಂಭವಿಸಿತ್ತು. ಈ ವೇಳೆ ಭವಾನಿ ರೇವಣ್ಣ ಬೈಕ್ ಸವಾರನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಅವರು ಅಕ್ಷಮ್ಯ ಪದಗಳನ್ನು ಬಳಕೆ ಮಾಡಿದ್ದಕ್ಕೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
Advertisement
Advertisement
ಈ ಘಟನೆಗೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಎಂಎಲ್‌ಸಿ ಸೂರಜ್ ರೇವಣ್ಣ, ಅಪಘಾತದಲ್ಲಿ ಬೈಕ್ ಸವಾರನದ್ದೇ ತಪ್ಪಿದೆ. ಆತ ಕುಡಿದು ಬೈಕ್ ಓಡಿಸಿದ್ದಾನೆ. ಇದೊಂದು ಆಕ್ಸಿಡೆಂಟ್, ಇನ್ಸಿಡೆಂಟ್ ಅಲ್ಲ. ಇದನ್ನು ಯಾರೂ ಬೇಕೆಂದೇ ಮಾಡುವುದಿಲ್ಲ. ಆ ವೇಳೆ ತಮ್ಮ ತಾಯಿ ಬಳಕೆ ಮಾಡಿರುವ ಪದಗಳು ತಪ್ಪಾಗಿವೆ. ತಾಯಿ ಬಳಸಿರುವ ಪದಗಳಿಗಾಗಿ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಸಿಪಿವೈ ಬಾವ ನಾಪತ್ತೆ ಪ್ರಕರಣ – ಕಾರು ಪತ್ತೆ, ಕಿಡ್ನ್ಯಾಪ್ ಶಂಕೆಗೆ ಪುಷ್ಠಿ ನೀಡಿದ ರಕ್ತದ ಕಲೆ!
Advertisement
ಸದ್ಯ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಇದಕ್ಕಿಂತಲೂ ಹೆಚ್ಚು ಏನು ಮಾಡಬೇಕು? ಇದರಲ್ಲಿ ಬೈಕ್ ಸವಾರನದ್ದೇ ತಪ್ಪಿದೆ ಎಂದು ಸೂರಜ್ ರೇವಣ್ಣ ಸಮರ್ಥಿಸಿಕೊಂಡಿದ್ದಾರೆ.
Advertisement
ಏನಿದು ಘಟನೆ..?: ಭಾನುವಾರ ಮೈಸೂರು ಜಿಲ್ಲೆಯ ಸಾಲಿಗ್ರಾಮ ಬಳಿ ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್ ಡಿಕ್ಕಿಯಾಗಿತ್ತು. ಇದರಿಂದ ರೊಚ್ಚಿಗೆದ್ದ ಭವಾನಿ ರೇವಣ್ಣ, ಬೈಕ್ ಸವಾರನಿಗೆ ಹಿಗ್ಗಾಮುಗ್ಗ ಜಾಡಿಸಿದ್ದಾರೆ. ಕಾರಿನ ಬೋರ್ಡ್‌ಗೆ ಡ್ಯಾಮೇಜ್ ಆಗಿದೆ ಎಂದು ಕ್ಲಾಸ್ ತೆಗೆದುಕೊಂಡಿದ್ದರು. ಈ ಎಲ್ಲಾ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ದಯವಿಟ್ಟು ಸೋಲಿನ ಹತಾಶೆ ಹೊರಹಾಕಬೇಡಿ – ಸಂಸತ್ ಅಧಿವೇಶನಕ್ಕೂ ಮುನ್ನ ವಿಪಕ್ಷಗಳಿಗೆ ಮೋದಿ ಸಲಹೆ