ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ಪರ ಇಂದು (ಸೋಮವಾರ) ಜಾಮೀನು ಅರ್ಜಿ ಸಲ್ಲಿಸುವುದಾಗಿ ಸೂರಜ್ ಪರ ವಕೀಲ (Advocate) ನಿಖಿಲ್ ಕಾಮತ್ ಮಾಹಿತಿ ನೀಡಿದ್ದಾರೆ.
ನ್ಯಾಯಾಧೀಶರು ಹೇಳಿದ್ದೇನು?
ಸೂರಜ್ ರೇವಣ್ಣ ಅವರನ್ನ ಬಂಧಿಸಿದ್ದ ಹಾಸನ ಹೊಳೆನರಸೀಪುರ ಪೊಲೀಸರು (Holenarasipura Police) ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರಾದ ಶಿವಕುಮಾರ್ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ರಾಜು ಸರ್ಕಾರದಿಂದ ಕೇಸ್ ಸಿಐಡಿಗೆ ವರ್ಗಾವಣೆ ಆಗಿರುವ ಆದೇಶವಾಗಿದೆ. ಆದ್ರೆ ಅಧಿಕೃತವಾಗಿ ಕೇಸ್ ದಾಖಲಾಗಿಲ್ಲ. ಆದ ಕಾರಣ ಸಿಐಡಿ ಅಧಿಕಾರಿಗಳು ಭಾನುವಾರ ನ್ಯಾಯಾಧೀಶರ ಮುಂದೆ ಹಾಜರಾಗಿಲ್ಲ. ಕಸ್ಟಡಿಗೆ ಬೇಕಿದ್ದರೆ ಓಪನ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಪಡೆಯಿರಿ ಅಂತ ನ್ಯಾಯಾಧೀಶರು ಸೂಚಿಸಿ, ನ್ಯಾಯಾಧೀಶರು ಸೂರಜ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದರು.
ಈ ಹಿನ್ನೆಲೆಯಲ್ಲಿ ಸೋಮವಾರ ಸಿಐಡಿ ಮುಂದಿನ ನಡೆ ನೋಡಿಕೊಂಡು ಜಾಮೀನು ಅರ್ಜಿ ಸಲ್ಲಿಸುವುದಾಗಿ ನಿಖಿಲ್ ಕಾಮತ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನೆಟ್ ಪರೀಕ್ಷೆ ಪೇಪರ್ ಸೋರಿಕೆ ಕೇಸ್ – ತನಿಖೆಗೆ ತೆರಳಿದ್ದ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ
ಸಿಐಡಿ ತನಿಖೆಗೆ ಆದೇಶ:
ಇನ್ನೂ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿದೆ. ಆದ್ರೆ ಅಧಿಕೃತವಾಗಿ ಸಿಐಡಿಗೆ ಪ್ರಕರಣ ವರ್ಗಾವಣೆ ಆಗಿಲ್ಲ. ಹೀಗಾಗಿ ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೋಮವಾರ ಬಾಡಿವಾರೆಂಟ್ ಮೇಲೆ ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಮಮಂದಿರದಲ್ಲಿ ಭಕ್ತರೆಲ್ಲಾ ಸಮಾನರು – ಅರ್ಚಕರು ವಿಐಪಿಗಳಿಗೆ ತಿಲಕ ಇಡುವಂತಿಲ್ಲ
ಸಂತ್ರಸ್ತನ ವಿರುದ್ಧ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಸೂರಜ್ ರೇವಣ್ಣ ಶನಿವಾರ ಸಂಜೆ ಹಾಸನದ ಸೆನ್ ಠಾಣೆಗೆ ತೆರಳಿದ್ದರು. ಈ ವೇಳೆ ಸೂರಜ್ ರೇವಣ್ಣರನ್ನ ವಶಕ್ಕೆ ಪಡೆದ ಹಾಸನ ಪೊಲೀಸರು ಮುಂಜಾನೆಯವರೆಗೂ ಸುದೀರ್ಘ ವಿಚಾರಣೆಗೆ ಒಳಪಡಿಸಿದರು. ಭಾನುವಾರ ಬೆಳಗ್ಗಿನ ಜಾವ ಸೂರಜ್‌ರನ್ನ ಅಧಿಕೃತವಾಗಿ ಬಂಧಿಸಿದರು. ಇದನ್ನೂ ಓದಿ: NEET-UG ಮರು ಪರೀಕ್ಷೆ – 1,563 ಪೈಕಿ 750 ಗೈರು, 63 ವಿದ್ಯಾರ್ಥಿಗಳು ಡಿಬಾರ್