ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ಸಲ್ಲಿಸಿದ್ದ ಜಮೀನು (Bail) ಅರ್ಜಿ ವಜಾಗೊಂಡಿದೆ.
ಹೊಳೆನರಸೀಪುರದಲ್ಲಿ (Holenarasipura) ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು 42 ಎಸಿಎಂಎಂ ಕೋರ್ಟ್‌ನಲ್ಲಿ ನಡೆಯಿತು. ಇದನ್ನೂ ಓದಿ: ಜೈಲಿನ ಊಟದಿಂದ ಫುಡ್ ಪಾಯಿಸನ್ ಆಗ್ತಿದೆ – ಮನೆ ಊಟ ಬೇಕೆಂದು ಹೈಕೋರ್ಟ್‌ಗೆ ದರ್ಶನ್ ಅರ್ಜಿ
Advertisement
Advertisement
27 ವರ್ಷದ ಸಂತ್ರಸ್ತನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಹೊಳೆನರಸೀಪುರ ಪೊಲೀಸರು ಬಂಧಿಸಿದ್ದರು. ಕೋರ್ಟ್ ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನ (Judicial Custody) ವಿಧಿಸಿದ್ದು ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ.
Advertisement
ಆರೋಪ ಸಾಬೀತಾದ್ರೆ ಶಿಕ್ಷೆ ಏನು?
ಐಪಿಸಿ 377 (ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ): ಜೀವಾವಧಿ ಅಥವಾ 10 ವರ್ಷಗಳ ಜೈಲು
ಐಪಿಸಿ 342 (ದುರುದ್ದೇಶದಿಂದ ಕೂಡಿ ಹಾಕುವುದು): 1 ವರ್ಷ ಜೈಲು ಅಥವಾ ದಂಡ
ಐಪಿಸಿ 506 (ಕ್ರಿಮಿನಲ್ ಪಿತೂರಿ, ಜೀವ ಬೆದರಿಕೆ): 2 ವರ್ಷ ಜೈಲು ಅಥವಾ ದಂಡ
Advertisement