ನವದೆಹಲಿ: ಯಾದಗಿರಿಯ ಸುರಪುರ (Surapura) ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ (By Election) ಮೇ 7ರಂದು ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಕೇಂದ್ರ ಚುನಾವಣಾ ಆಯೋಗ (central election Commission) ಇಂದು ಲೋಕಸಭಾ ಚುನಾವಣೆಯ (Lok Sabha Election) ದಿನಾಂಕದೊಂದಿಗೆ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ.
ಕರ್ನಾಟಕದಲ್ಲಿ (Karnataka) ಮೇ 7ರಂದು ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯಲಿದ್ದು ಅದೇ ದಿನ ಸುರಪುರದಲ್ಲೂ ಉಪಚುನಾವಣೆ ನಡೆಯಲಿದೆ. ಹೀಗಾಗಿ ಸುರಪುರ ವಿಧಾನಸಭಾ ಕ್ಷೇತ್ರದ ಜನರು ಲೋಕಸಭೆ ಮತ್ತು ವಿಧಾನಸಭೆಗೆ ಮತವನ್ನು ಹಾಕಲಿದ್ದಾರೆ. ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ಏ.26, ಮೇ 7ಕ್ಕೆ ಮತದಾನ
ಕಾಂಗ್ರೆಸ್ (Congress) ಶಾಸಕ ರಾಜಾ ವೆಂಕಟಪ್ಪನಾಯಕ (Raja Venkatappa Nayaka) ಅವರು ನಿಧನರಾದ್ದರಿಂದ ಸುರಪುರ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ.