– ಸಕಲ ಸರ್ಕಾರಿ ಗೌರವಗಳೊಂದಿಗೆ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅಂತ್ಯಸಂಸ್ಕಾರ
– ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ, ಮಲ್ಲಿಕಾರ್ಜುನ ಖರ್ಗೆ
ಯಾದಗಿರಿ: ಸುರಪುರ (Surapura) ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Naik) ಪಂಚಭೂತಗಳಲ್ಲಿ ಲೀನವಾಗಿದ್ದಾರೆ.
Advertisement
ಹೃದಯಾಘಾತದಿಂದ ಭಾನುವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ವೆಂಕಟಪ್ಪ ನಾಯಕ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮ ಸುರಪುರಕ್ಕೆ ಇಂದು ಬೆಳಗಿನ ಜಾವ 5 ಗಂಟೆಗೆ ತರಲಾಯಿತು. ಇದನ್ನೂ ಓದಿ: ಶ್ರೀಲಂಕಾದಿಂದ ತಂದು ಅಕ್ರಮ ಸಾಗಾಟ – ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1 ಕೆಜಿ ಚಿನ್ನ ಸೀಜ್
Advertisement
Advertisement
ಸುರಪುರ ಪಟ್ಟಣದಲ್ಲಿರುವ ವಸಂತ ನಗರದ ದರ್ಬಾರ್ ಹೌಸ್‌ನಲ್ಲಿ ಬೆಳಗ್ಗೆ ರಾಜ ಮನೆತನದ ಪ್ರಕಾರ ಅಂತಿಮ ವಿಧಿವಿಧಾನಗಳನ್ನು ಮಾಡಲಾಯಿತು. ಫೆಬ್ರವರಿ 1ರಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದ ರಾಜಾ ವೆಂಕಟಪ್ಪನ ಅಗಲಿಕೆಯಿಂದ ಸಹಸ್ರಾರು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಬೆಳಗ್ಗೆ 11 ಗಂಟೆ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಾದಂತೆ ಪ್ರಭು ಕಾಲೇಜು ಆವರಣದಲ್ಲಿ ಪಾರ್ಥಿವ ಶರೀರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಅಂತಿಮ ದರ್ಶನ ಪಡೆಯಲು 30 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆಯರು, ಯುವಕರು ಸೇರಿದ್ದರಿಂದ ನೂಕುನುಗ್ಗಲು ಉಂಟಾಯಿತು. ಪೋಲಿಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು. ಇದನ್ನೂ ಓದಿ: ಬ್ರಿಟನ್ ಲೇಖಕಿ ನಿತಾಶಾ ಕೌಲ್‌ಗೆ ನೋ ಎಂಟ್ರಿ – ಬೆಂಗಳೂರು ವಿಮಾನ ನಿಲ್ದಾಣದಿಂದಲೇ ವಾಪಸ್
Advertisement
ಇನ್ನೂ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಶರಣಬಸಪ್ಪ ದರ್ಶನಾಪೂರ, ಪ್ರಿಯಾಂಕ್ ಖರ್ಗೆ, ನಾಗೇಂದ್ರ ಸೇರಿದಂತೆ ಹಲವು ಸಚಿವರು, ಶಾಸಕರು ಪಕ್ಷಾತೀತವಾಗಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಸಕಲ ಸರ್ಕಾರಿ ಗೌರವಗಳೊಂದಿಗೆ ರಾಜಾ ವೆಂಕಟಪ್ಪ ನಾಯಕ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಪ್ಯಾಪ್ಲಿ ರಾಜ ಮನೆತನದ ಪ್ರಕಾರ ಯಾದಗಿರಿ ನಗರದ ಹಾಲಬಾವಿ ಹತ್ತಿರ ಇರುವ ಪ್ಯಾಪ್ಲಿ ರಾಜಮನೆತನದ ರುದ್ರ ಭೂಮಿಯಲ್ಲಿ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಂತ್ಯ ಸಂಸ್ಕಾರ ಮಾಡಲಾಯಿತು. ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬಂದಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ಶಾಸಕರನ್ನು ನೆನೆದು ಕಣ್ಣೀರ ಕೋಡಿ ಹರಿಸಿದರು. ಇದನ್ನೂ ಓದಿ: ಬಹುಭಾಷಾ ಗಾಯಕ ಪಂಕಜ್ ನಿಧನ: ಕನ್ನಡದ ‘ಸ್ಪರ್ಶ’ ಚಿತ್ರಕ್ಕೂ ಹಾಡಿದ್ದ ಸಿಂಗರ್