ಮಂಗಳೂರು: ಸುರತ್ಕಲ್‍ನ ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಅಜಿತ್ ಎಂಬಾತ ಹತ್ಯೆ ಬಳಿಕ ಆರೋಪಿಗಳನ್ನು ಕಾರ್‌ನಲ್ಲಿ ಕರೆದೊಯ್ದಿದ್ದ. ಕಾರ್ ಚಾಲಕನಾಗಿದ್ದ ಕಾರಣಕ್ಕೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ದ.ಕ ಜಿಲ್ಲೆಯಲ್ಲಿ 3 ದಿನಗಳ ಕಾಲ ಕಟ್ಟೆಚ್ಚರ – ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ
ಘಟನೆ ವಿವರ:
ಜುಲೈ 28 ರಂದು ಮಂಗಳೂರು ಬಳಿಯ ಸುರತ್ಕಲ್‍ನಲ್ಲಿ ಕಾರ್‌ನಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಜಿಲ್ (23)ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಗ್ಯಾಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಫಾಸಿಲ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಫಾಜಿಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದ. ಇದನ್ನೂ ಓದಿ: ಪ್ರವೀಣ್ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ
ಸುರತ್ಕಲ್ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಜಿಲ್ ಜುಲೈ 28ರ ರಾತ್ರಿ 8 ಗಂಟೆಯ ಸುಮಾರಿಗೆ ಎಂಆರ್‌ಪಿಎಲ್ ರಸ್ತೆಯ ಸುರತ್ಕಲ್ ಮಾರುಕಟ್ಟೆ ಸನಿಹದ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿತ್ತು. ಆ ಬಳಿಕ ಕರಾವಳಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಮತ್ತೆ ಪರಿಸ್ಥಿತಿ ತಿಳಿಗೊಂಡಿದ್ದು, ಪೊಲೀಸರು ಶಾಂತಿಯುತ ವಾತಾವರಣ ಮರುಕಳಿಸಲು ಪ್ರಯತ್ನಿಸುತ್ತಿದ್ದಾರೆ.