DistrictsKarnatakaLatestLeading NewsMain PostUdupi

ಫಾಜಿಲ್ ಹತ್ಯೆ ಪ್ರಕರಣ – ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆ!

Advertisements

ಉಡುಪಿ: ಸುರತ್ಕಲ್‌ನ ಯುವಕ ಫಾಜಿಲ್ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಇಯಾನ್ ಕಾರು ಬಳಸಿರುವ ಮಾಹಿತಿ ಹೊರ ಬಿದ್ದಿತ್ತು. ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಅಪರಿಚಿತ ಕಾರು ಪತ್ತೆಯಾಗಿದ್ದು, ಇದೀಗ ಕಾರಿನಲ್ಲಿ ರಕ್ತದ ಕಲೆಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಪಡುಬಿದ್ರಿ ಠಾಣೆ ವ್ಯಾಪ್ತಿಯ ಕಾಜರಕಟ್ಟೆಯ ನಿರ್ಜನ ಪ್ರದೇಶದಲ್ಲಿ ಕಾರು ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಅದರಲ್ಲಿ ಮೈಕ್ರೋ ಸಿಮ್ ಪತ್ತೆಯಾಗಿದೆ. ಕಾರಿನ ಹಿಂಬದಿ ಸೀಟಿನಲ್ಲಿ ರಕ್ತದ ಕಲೆಗಳೂ ಪತ್ತೆಯಾಗಿದೆ.

ನೀರಿನ ಬಾಟಲಿ, ಚಿಲ್ಲರೆ ಹಣವೂ ಕಾರಿನಲ್ಲಿದ್ದು, ಆರೋಪಿಗಳು ಈ ಕಾರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಇನ್ನೊಂದು ಕಾರಿನಲ್ಲಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರ ಕಣ್ತಪ್ಪಿಸಲು ಆರೋಪಿಗಳು ಟೋಲ್ ಗೇಟ್ ಅನ್ನು ತಪ್ಪಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ISIS ನಂಟು – ತುಮಕೂರಿನಲ್ಲೂ ಶಂಕಿತ ಉಗ್ರನ ಸೆರೆ

ಫಾಜಿಲ್ ಹತ್ಯೆ ಸಂಬಂಧ 51 ಜನರನ್ನು ವಿಚಾರಣೆ ಮಾಡಲಾಗಿತ್ತು. 8 ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಘಟನೆಯ ಬಳಿಕ ಸಿಸಿಟಿವಿ ದೃಶ್ಯ ಆಧರಿಸಿ 8 ಇಯಾನ್ ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು. ಸಿಸಿಟಿವಿಯಲ್ಲಿ ಕಾರಿನ ನಂಬರ್ ಸ್ಪಷ್ಟವಾಗಿ ಕಾಣಿಸದ ಕಾರಣ ಕಾರಿನ ಇತರ ಗುರುತುಗಳನ್ನು ಹಿಡಿದು ತನಿಖೆ ಮಾಡಲಾಗಿತ್ತು.

ಇದೀಗ ಪತ್ತೆಯಾಗಿರುವ ಕಾರನ್ನೇ ಆರೋಪಿಗಳು ಬಳಸಿದ್ದರೆಯೇ ಎಂಬುದು ಇನ್ನೂ ದೃಢವಾಗಿಲ್ಲ. ಇದನ್ನೂ ಓದಿ: ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ: ಎಡಿಜಿಪಿ ಅಲೋಕ್‌ ಕುಮಾರ್‌

Live Tv

Leave a Reply

Your email address will not be published.

Back to top button