ಮಂಗಳೂರು: ಪ್ರವೀಣ್ ಹತ್ಯೆಯ ಬೆನ್ನಲ್ಲೆ ಮತ್ತೊಬ್ಬ ಯುವಕ ಫಾಸಿಲ್‌ನ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಬಜ್ಬೆ, ಪಣಂಬೂರು, ಸುರತ್ಕಲ್, ಮುಲ್ಕಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬಜ್ಬೆ, ಪಣಂಬೂರು, ಸುರತ್ಕಲ್, ಮುಲ್ಕಿ ವ್ಯಾಪ್ತಿಯ 4 ಠಾಣೆಗಳಲ್ಲಿ ನಿಷೇಧಾಜ್ಞೆ ಜಾರಿಗೆ ಮಂಗಳೂರು ಕಮಿಷನರ್ ಶಶಿಕುಮಾರ್ ಆದೇಶ ನೀಡಿದ್ದಾರೆ. ನಗರದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದು, ಯಾವುದೇ ವಂದತಿಗೂ ಕಿವಿಗೊಡಬೇಡಿ. ಫಾಸಿಲ್ ಹತ್ಯೆಗೆ ಸಂಬಂಧಿಸಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳುತ್ತೇವೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬಿಳಲಿದೆ ಎಂದು ತಿಳಿಸಿದ್ದಾರೆ.
Advertisement
Advertisement
ಘಟನೆಯೇನು?: ಕಾರ್‌ನಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಸಿಲ್(23)ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಮಂಗಳೂರು ಬಳಿಯ ಸುರತ್ಕಲ್‍ನಲ್ಲಿ ನಡೆದಿದೆ. ಗ್ಯಾಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಫಾಸಿಲ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ. ಚಿಕಿತ್ಸೆ ಫಲಕಾರಿಯಾಗದೇ ಫಾಸಿಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ
Advertisement
Advertisement
ಸುರತ್ಕಲ್ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಸಿಲ್ ಅವರು, ರಾತ್ರಿ 8 ಗಂಟೆಯ ಸುಮಾರಿಗೆ ಎಂಆರ್‍ಪಿಎಲ್ ರಸ್ತೆಯ ಸುರತ್ಕಲ್ ಮಾರುಕಟ್ಟೆ ಸನಿಹದ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಬಳಿಕ ನಮ್ಮ ನಾಯಕರು ತಲೆಯೆತ್ತಿ ಓಡಾಡೋಕೆ ಆಗ್ತಿಲ್ಲ – ವಿಜಯೇಂದ್ರ
ಈ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಫಾಝಿಲ್ ಎಂಆರ್‌ಪಿಎಲ್‍ನಲ್ಲಿ ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು. ಘಟನೆ ಸಂಬಂಧಿಸಿ ಸುರತ್ಕಲ್ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.