ಮಂಗಳೂರು: ಕಳೆದ ವಾರವಷ್ಟೇ ಬೆಂಗಳೂರಿನಲ್ಲಿ ನೈತಿಕ ಪೊಲೀಸ್‍ಗಿರಿ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಇದು ಮಾಸುವ ಮುನ್ನವೇ ಕೋಮು ಸೂಕ್ಷ್ಮ ಪ್ರದೇಶ ದಕ್ಷಿಣ ಕನ್ನಡದಲ್ಲಿ ಮತ್ತೊಂದು ನೈತಿಕ ಪೊಲೀಸ್‍ಗಿರಿ ಪ್ರಕರಣ ವರದಿ ಆಗಿದೆ.
ಕಳೆದ ಭಾನುವಾರ ಎರಡು ಕೋಮಿನ ಎಂಬಿಬಿಎಸ್ ವಿದ್ಯಾರ್ಥಿಗಳು (ಯುವಕ, ಯುವತಿಯರು) ಮಲ್ಪೆ ಪ್ರವಾಸ ಮುಗಿಸಿ ಮಂಗಳೂರಿಗೆ ವಾಪಸ್ ಆಗುವಾಗ, ಸುರತ್ಕಲ್ ಬಳಿ ಕಾರು ತಡೆದ ಯುವಕರ ಗುಂಪೊಂದು ಹಲ್ಲೆ ನಡೆಸಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಇನ್ಸ್‍ಪೆಕ್ಟರ್ ಮನವಿಗೂ ಕಿಮ್ಮತ್ತು ನೀಡದ ಪುಂಡರು ದಾಳಿ ನಡೆಸಿದ್ರು.
Advertisement
Advertisement
ಈ ಬಗ್ಗೆ ಪಬ್ಲಿಕ್ ಟಿವಿ ಇಂದು ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೇ, ಕಾರ್ಯಾಚರಣೆ ನಡೆಸಿದ ಪೊಲೀಸರು ಸಂಘಟನೆಯೊಂದರ ಐವರನ್ನು ಬಂಧಿಸಿ ಸ್ಟೇಷನ್ ಬೇಲ್ ಮೇಲೆ ರಿಲೀಸ್ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಮಂಗಳೂರಿನ ಪ್ರಕರಣ ನಮ್ಮ ಗಮನಕ್ಕೆ ಬಂದಿದೆ. ಇಂತಹ ಘಟನೆ ಮರುಕಳಿಸದ ರೀತಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.
Advertisement
ಇತ್ತ ಸಿದ್ದರಾಮಯ್ಯ ಟ್ವೀಟ್ ಮಾಡಿ, ಸನ್ಮಾನ್ಯ ಮುಖ್ಯಮಂತ್ರಿಗಳೇ ಮಂಗಳೂರಲ್ಲಿ ಇರೋದು ಬಿಜೆಪಿ ಸರ್ಕಾರನಾ..? ತಾಲಿಬಾನ್ ಸರ್ಕಾರನಾ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ