ಬೆಳಗಾವಿ: ವಿರೋಧ ಪಕ್ಷದವರು ಪೌರತ್ವ ಕಾಯ್ದೆಯನ್ನು ವಿರೋಧಿಸಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಸಾರ್ವಜನಿಕ ಹಾಗೂ ರೈಲ್ವೆ ಇಲಾಖೆಯ ಆಸ್ತಿ-ಪಾಸ್ತಿ ಹಾನಿ ಮಾಡಬಾರದು ಎಂದು ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ಹೇಳಿದರು.
ಸದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಭದ್ರತೆಗೆ 370 ಕಾಯ್ದೆ, ತಲಾಖೆ ಕಾಯ್ದೆ, ರಾಮಮಂದಿರದ ತೀರ್ಪು ಹೆಮ್ಮೆ ಪಡುವಂಥದ್ದು. ಇತ್ತೀಚೆಗೆ ಪೌರತ್ವದ ಕಾಯ್ದೆ ಮಸುದೆಯನ್ನು ಜಾರಿಗೆ ತಂದರು.
Advertisement
ಅಪಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಇಸ್ಲಾಂ ರಾಷ್ಟ್ರ ಎಂದು ಘೋಷಣೆ ಮಾಡಿದ ಮೇಲೆ ಮೂರು ರಾಷ್ಟ್ರದ ಜನ ಸೌಹಾರ್ದತೆಗಾಗಿ ಅಲ್ಲಿನ ಜನ ಭಾರತಕ್ಕೆ ಬರಲು ತುದಿಗಾಗಲಲ್ಲಿ ನಿಂತಿದ್ದರು. ಆದರೆ ಕೇಂದ್ರ ಗೃಹ ಸಚಿವ ಪೌರತ್ವ ಕಾಯ್ದೆ ಜಾರಿಗೆ ತಂದರು. ಇದನ್ನು ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Advertisement
Advertisement
ವಿರೋಧ ಪಕ್ಷದವರು ಈ ಕಾಯ್ದೆಯನ್ನು ವಿರೋಧಿಸಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಸಾರ್ವಜನಿಕ ಹಾಗೂ ರೈಲ್ವೆ ಇಲಾಖೆಯ ಆಸ್ತಿ-ಪಾಸ್ತಿ ಹಾನಿ ಮಾಡಬಾರದು. ಒಂದು ವೇಳೆ ಮಾಡಿದರೆ ಆಯಾ ರಾಜ್ಯದ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಮುಂದಾಗುತ್ತಾರೆ. ಭಾರತದಲ್ಲಿ ನುಸುಳುಕೋರರು ಜಾಸ್ತಿ ಆಗಿದ್ದಾರೆ. ಅವರು ಎಲ್ಲಾ ಕ್ಷೇತ್ರದಲ್ಲಿ ಹಿಡಿತ ಸಾಧಿಸುತ್ತಿದ್ದಾರೆ. ಆದ್ದರಿಂದ ಪೌರತ್ವ ಕಾಯ್ದೆ ಜಾರಿಗೆ ತಂದಿದೆ. ಇದರಿಂದ ಭಾರತದ ಜನರಿಗೆ ಯಾವುದೇ ರೀತಿಯ ತೊಂದರೆ ಇಲ್ಲ. ಇದನ್ನು ವಿರೋಧ ಪಕ್ಷದವರು ವಿನಾಕಾರಣ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
Advertisement
ಆಯಾ ರಾಜ್ಯ ಸರ್ಕಾರಗಳಿಗೆ ರೈಲ್ವೆ ಇಲಾಖೆಯನ್ನು ರಕ್ಷಣೆ ಮಾಡುವಂತೆ ಸೂಚಿಸಲಾಗಿದೆ. ಒಂದು ರೈಲು ನಿರ್ಮಾಣ ಮಾಡಬೇಕಾದರೆ 15 ಲಕ್ಷಕ್ಕೂ ಅಧಿಕ ಜನರು ಬರುತ್ತದೆ. ಸರ್ಕಾರದ ಆಸ್ತಿ ಹಾನಿ ಮಾಡುವವರ ವಿರುದ್ಧ ಗುಂಡಿಕ್ಕಿ ಎಂದು ಆಕ್ರೋಶದಿಂದ ಹೇಳಿಕೆ ನೀಡಿದ್ದೆ ಎಂದು ಸ್ಪಷ್ಟಪಡಿಸಿದರು.
ಮಾಜಿ ಸಚಿವ ಯು.ಟಿ.ಖಾದರ್ ಜವಬ್ದಾರಿಯುತದಲ್ಲಿರುವವರು. ಜನರಿಗೆ ಪ್ರಚೋಧನಕಾರಿ ಹೇಳಿಕೆ ನೀಡಿದ್ದಾರೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಸಕ ಅಭಯ ಪಾಟೀಲ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಡಾ.ವಿ.ಐ.ಪಾಟೀಲ, ನಗರಾಧ್ಯಕ್ಷ ರಾಜೇಂದ್ರ ಹರಕುಣಿ, ಬಿಜೆಪಿ ಮುಖಂಡ ಎಂ.ಬಿ.ಜೀರಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.