ಮಂಡ್ಯ; ಜಿಲ್ಲೆಯಲ್ಲಿ ಕೆಲವು ಕಾಂಗ್ರೆಸ್ ನಾಯಕರು ಹೆಂಗಸನ್ನು ಮುಂದಿಟ್ಟುಕೊಂಡು ಶಿಖಂಡಿ ರಾಜಕೀಯ ಮಾಡುತ್ತಿದ್ದಾರೆ ಎಂದು ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್‍ಗೌಡ ಅವರು ಆಕ್ರೋಶ ಹೊರಹಾಕಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಬಾರಿ ಮಂಡ್ಯದ ಲೋಕಸಭಾ ಚುನಾವಣೆಯಲ್ಲಿ ಮೂಲ ಕಾಂಗ್ರೆಸಿಗರು ಮಾತ್ರ ಮೈತ್ರಿ ಧರ್ಮ ಪಾಲಿಸಿದ್ದಾರೆ. ಯಾರು ಇತ್ತೀಚೆಗೆ ಕಾಂಗ್ರೆಸ್‍ಗೆ ವಲಸೆ ಹೋಗಿದ್ದಾರೋ ಅವರಲ್ಲಿ ಬಹುತೇಕ ಶೇ.80 ರಷ್ಟು ಜನರು ಮೈತ್ರಿ ಧರ್ಮ ಪಾಲನೆ ಮಾಡಿಲ್ಲ. ಅವರೆಲ್ಲರೂ ನಮ್ಮ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧವಾಗಿ ಕೆಲಸ ಮಾಡಿದ್ದಾರೆ ಎಂದು ದೂರಿದರು.
Advertisement
Advertisement
Advertisement
ಮೂಲ ಕಾಂಗ್ರೆಸಿಗರಾದ ಆತ್ಮಾನಂದ ಮತ್ತು ಜಿಲ್ಲಾಧ್ಯಕ್ಷ ಗಂಗಾಧರ್ ಸೇರಿದಂತೆ ಹಲವರು ಈ ಬಾರಿ ತಟಸ್ಥರಾಗಿರಲಿಲ್ಲ ತಮ್ಮ ಶಕ್ತಿ ಮೀರಿ ಮೈತ್ರಿ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದಾರೆ. ಅವರು ಈ ಬಾರಿ ಬಹಿರಂಗವಾಗಿಯೇ ನನ್ನ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದಾರೆ. ಇತ್ತೀಚೆಗೆ ಹೋದವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ತಿಳಿಯದೆ ಬ್ಲಾಕ್ ಮೇಲ್ ರಾಜಕಾರಣ ಮಾಡಿದ್ದಾರೆ ಎಂದು ಕಿಡಿಕಾರಿದರು.
Advertisement
ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಗೆ ಸುಮಲತಾ ಪರವಾಗಿ ಹಲವಾರು ಕಾಂಗ್ರೆಸ್ ನಾಯಕರು ಈ ಬಾರಿ ಚುನಾವಣೆ ಮಾಡಿದ್ದಾರೆ. ಒಂದಂತು ಸತ್ಯ ಇದೆರಲ್ಲದರ ಹಿಂದೆ ಯಾರದೋ ಪ್ರಬಲ ವ್ಯಕ್ತಿಯ ಕೈವಾಡ ವಿದೆ ಎಂದು ಅನುಮಾನ ವ್ಯಕ್ತಪಡಿಸಿದರು.