ಮುಂಬೈ: ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯದ ಟೂರ್ನಿಗೆ ಅಂಬಟಿ ರಾಯುಡು ಸ್ಥಾನದಲ್ಲಿ ಸುರೇಶ್ ರೈನಾ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ.
ಬೆಂಗಳೂರಿನಲ್ಲಿ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ಅಂಬಟಿ ರಾಯುಡು ಫೇಲ್ ಆಗಿ ಟೂರ್ನಿಯಿಂದ ಹೊರಬಿದ್ದಿದ್ದರು. ಸದ್ಯ ರಾಯುಡು ಸ್ಥಾನಕ್ಕೆ ರೈನಾ ಕಮ್ ಬ್ಯಾಕ್ ಮಾಡಿದ್ದಾರೆ.
UPDATE: @ImRaina to replace Ambati Rayudu in India's ODI squad for series against England.
Details – https://t.co/lEODJoRVtV pic.twitter.com/6Us2ao35m5
— BCCI (@BCCI) June 16, 2018
32 ವರ್ಷದ ಅಂಬಟಿ ರಾಯುಡು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಭರ್ಜರಿ ಪ್ರದರ್ಶನ ನೀಡಿದ್ದರು. ಅಲ್ಲದೇ ಬಿಸಿಸಿಐ ಆಯ್ಕೆ ಸಮಿತಿ ರಾಯುಡುರನ್ನು ಇಂಗ್ಲೆಂಡ್ ವಿರುದ್ಧ ಸರಣಿಗೆ ಆಯ್ಕೆ ಮಾಡಿತ್ತು. ಆದರೆ ಶುಕ್ರವಾರ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದರು. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ 43ರ ಸರಾಸರಿಯಲ್ಲಿ 602 ರನ್ ಗಳಿಸಿದ್ದ ರಾಯುಡು ಉತ್ತಮ ಫಾರ್ಮ್ ಹೊಂದಿದ್ದರು.
ಕಳೆದ ಬಾರಿ ಫಿಟ್ನೆಸ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದ ರೈನಾ ಈ ಬಾರಿ ಫಿಟ್ನೆಸ್ ಪರೀಕ್ಷೆ ಪಾಸ್ ಮಾಡಿ ಮತ್ತೆ ಟೀಂ ಇಂಡಿಯಾ ಕಮ್ ಮಾಡಲು ಯಶಸ್ವಿ ಆಗಿದ್ದಾರೆ. 2015 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಯ ಏಕದಿನ ಪಂದ್ಯವಾಡಿದ್ದ ರೈನಾ ಬಳಿಕ ತಂಡದಲ್ಲಿ ಸ್ಥಾನಗಳಿಸಲು ವಿಫಲರಾಗಿದ್ದರು. ಆದರೆ ಟಿ20 ಮಾದರಿಯಲ್ಲಿ ತಂಡವನ್ನು ಪ್ರತಿನಿಧಿಸಿದ್ದರು. ಇಂಗ್ಲೆಂಡ್ ವಿರುದ್ಧ ಟಿ20 ಏಕದಿನ ಸರಣಿ ಜುಲೈ 12 ರಂದು ಆರಂಭವಾಗಲಿದ್ದು, ಒಟ್ಟು ಮೂರು ಪಂದ್ಯಗಳ ಸರಣಿ ಜುಲೈ 17 ರಂದು ಮುಕ್ತಾಯಗೊಳ್ಳಲಿದೆ.
ಟೀಂ ಇಂಡಿಯಾ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಸುರೇಶ್ ರೈನಾ, ಎಂಎಸ್ ಧೋನಿ (ಕೀಪರ್), ದಿನೇಶ್ ಕಾರ್ತಿಕ್, ಯಜುವೇಂದ್ರ ಚಹಲ್, ಕುಲ್ ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಜಸ್‍ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಿದ್ದಾರ್ಥ್ ಕೌಲ್, ಉಮೇಶ್ ಯಾದವ್.