ಮೈಸೂರು: ರೇಣುಕಾಸ್ವಾಮಿ (Renukaswamy) ಕೊಲೆ ಕೇಸ್‍ನಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಹೊರಗೆ ಬಂದಿರುವ ನಟ ದರ್ಶನ್ (Darshan) ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಸಂಕ್ರಾಂತಿ ಹಬ್ಬದ ವೇಳೆಯ ದರ್ಶನ್‍ಗೆ ಆಪರೇಷನ್ ಫಿಕ್ಸ್ ಆಗಿದ್ದು, ಮೈಸೂರಿನ (Mysuru) ಆಸ್ಪತ್ರೆಯೊಂದರಲ್ಲಿ ಆಪರೇಷನ್‍ಗೆ ಒಳಗಾಗಲಿದ್ದಾರೆ. ಅಪರೇಷನ್ ಮಾಡಿದ ಒಂದೂವರೆ ತಿಂಗಳು ಫೈಟ್ ದೃಶ್ಯದಲ್ಲಿ ದರ್ಶನ್ ಭಾಗಿಯಾಗುವಂತಿಲ್ಲ. ಕೇವಲ ಚಿತ್ರೀಕರಣದಲ್ಲಿ ಮಾತ್ರ ಭಾಗಿಯಾಗಬಹುದು ಎಂದು ದರ್ಶನ್‍ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಅಜಯ್ ಹೆಗ್ಡೆ ಮಾಹಿತಿ ನೀಡಿದ್ದಾರೆ.
Advertisement
Advertisement
ಫೆಬ್ರವರಿಯಲ್ಲಿ ದರ್ಶನ್ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಇದಕ್ಕಾಗಿ ಚಿತ್ರೀಕರಣಕ್ಕೂ ಮುನ್ನ ಅಪರೇಷನ್ ಮಾಡಿಸಿಕೊಳ್ಳಲು ನಿರ್ಧರಿಸಿದ್ದಾರೆ. ಆಪರೇಷನ್ ಬಳಿಕ 3 ದಿನ ವಿಶ್ರಾಂತಿಯಲ್ಲಿರಬೇಕು ಎಂದು ವೈದ್ಯರು ತಿಳಿಸಿದ್ದಾರೆ.
Advertisement
Advertisement
ಈಗ ದರ್ಶನ್ ವರ್ಕೌಟ್ ಶುರು ಮಾಡಿದ್ದಾರೆ. ಆದರೆ ಅಪ್ಪರ್ ಬಾಡಿ, ಲೋಯರ್ ಬಾಡಿ ವರ್ಕೌಟ್ ಮಾಡಲು ಬಿಟ್ಟಿಲ್ಲ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.