ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳ ಸಭೆ ಮಾಡಿ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ (Randeep Singh Surjewala) ಕಾನೂನು ಉಲ್ಲಂಘನೆ ಮಾಡಿದ್ದಾರೆ. ಈ ಬಗ್ಗೆ ಕ್ರಮ ಆಗಬೇಕು ಅಂತ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ (Ashwath Narayan) ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರಿನ ಬಿಜೆಪಿ (BJP Office) ಕಚೇರಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲ ಅಧಿಕಾರಿಗಳ ಸಭೆ ಮಾಡಿರೋದು ಖಂಡನೀಯ. ಕಾಂಗ್ರೆಸ್ (Congress) ಪಕ್ಷದಿಂದ ಅಧಿಕಾರ ದುರ್ಬಳಕೆ ಆಗಿದೆ. ಇದಕ್ಕೆ ಅವಕಾಶ ಕೊಡಬಾರದು. ನಾವು ಈ ಸಂಬಂಧ ರಾಜ್ಯಪಾಲ ಪಾಲರಿಗೆ ದೂರು ಕೊಡ್ತೀವಿ. ರಾಜ್ಯಪಾಲರು (Governor) ಕಾಂಗ್ರೆಸ್ ಕಿವಿ ಹಿಂಡೋ ಕೆಲಸ ಮಾಡಬೇಕು ಅಂತ ಮನವಿ ಮಾಡ್ತೀವಿ ಎಂದರು.
Advertisement
Advertisement
ಖಾಸಗಿ ಹೊಟೇಲ್ ನಲ್ಲಿ ಬಿಬಿಎಂಪಿ (BBMP) ಅಧಿಕಾರಿಗಳ ಜೊತೆ ಸುರ್ಜೇವಾಲ ಅವರ ಸಭೆ ಉದ್ದೇಶ ಏನು ಗೊತ್ತಿಲ್ಲ. ಸರ್ಕಾರದ ಸಭೆಯಲ್ಲಿ ಪಕ್ಷದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಬಾರದು. ಇದರಲ್ಲಿ ಕಾನೂನು ಉಲ್ಲಂಘನೆ ಆಗಿದೆ. ಕಾಂಗ್ರೆಸ್ ಕಾನೂನು ಉಲ್ಲಂಘನೆ ಮಾಡೋದೆ ಕೆಲಸ. ಈ ಬಗ್ಗೆ ಕ್ರಮ ಆಗಬೇಕು ಅಂತ ಒತ್ತಾಯ ಮಾಡಿದರು. ಇದನ್ನೂ ಓದಿ: ಫೋಟೋ ಲೀಕ್- ಸಚಿವ ಜಮೀರ್‌ಗೆ ಸುರ್ಜೇವಾಲ ಕ್ಲಾಸ್
Advertisement
ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಅವರಿಂದ ಸಿಎಂ ಸ್ಥಾನದ ಹೇಳಿಕೆಗೆ ಇದೇ ವೇಳೆ ಪ್ರತಿಕ್ರಿಯೆ ನೀಡಿದ ಅವರು, ಇದು ಕಾಂಗ್ರೆಸ್ ಪಕ್ಷದ ವಿಚಾರ. ಪರಮೇಶ್ವರ್ ಅವರಿಗೆ ಸಿಎಂ ಆಗೋ ಆಸೆ ಇದೆ. ಅವರಿಗೂ ಸಿಎಂ ಆಗೋ ಅಪೇಕ್ಷೆ ಇರಬಹುದು. ಅವರ ಪಕ್ಷದ ನಿರ್ಣಯದ ಬಗ್ಗೆ ನಾನು ಮಾತಾಡಲ್ಲ. ಪರಮೇಶ್ವರ್ ಅವರಿಗೆ ಶುಭ ಕೋರಬಹುದು ಅಷ್ಟೆ ಎಂದು ಹೇಳಿದರು.