ಮಂಗಳೂರು: ರಾಜಕೀಯ ಮೈಲೇಜ್‌ಗೋಸ್ಕರ ಶರಣಾಗತಿ ಪ್ರಕ್ರಿಯೆ ನಡೆಸಲಾಗಿದೆ ಎಂದು ರಾಜ್ಯದಲ್ಲಿ ನಕ್ಸಲರ ಶರಣಾಗತಿಯ ಕುರಿತು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಟೀಕಿಸಿದರು.
ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ನಕ್ಸಲರ ಶರಣಾಗತಿ ಸಂಶಯ ಮೂಡಿಸುತ್ತಿದೆ. 6 ಮಂದಿ ನಕ್ಸಲರ ಶರಣಾಗತಿಯ ಕುರಿತು ಸರ್ಕಾರ ನಡೆದುಕೊಂಡ ರೀತಿ ಹಾಗೂ ನಾಯಕ ವಿಕ್ರಂಗೌಡ ಎನ್‌ಕೌಂಟರ್ ಕೂಡ ಸಂಶಯ ಮೂಡಿಸುತ್ತಿದೆ. ಈ ಹಿಂದೆ ನಾನು ಚಿಕ್ಕಮಗಳೂರು ಎಸ್ಪಿ ಆಗಿದ್ದ ಸಂದರ್ಭದಲ್ಲಿ ನಕ್ಸಲರು ಶರಣಾಗಿದ್ದರು. ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿದ್ದೆ. ನಿಯಮಗಳ ಪ್ರಕಾರ ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಎದುರು ನಕ್ಸಲರು ಶರಣಾಗಬೇಕು. ಆನಂತರ ಬೇರೆ ಪ್ರಕ್ರಿಯೆಗಳು ನಡೆಯುತ್ತದೆ. ಇಲ್ಲಿ ರಾಜಕೀಯ ಮೈಲೇಜ್‌ಗೋಸ್ಕರ ಶರಣಾಗತಿ ಪ್ರಕ್ರಿಯೆ ನಡೆಸಲಾಗಿದೆ ಎಂದರು.ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ, ನಾದಿನಿ ಜೊತೆ ಸೇರಿ ತಮ್ಮನನ್ನೇ ಕೊಲೆಗೈದ ಅಣ್ಣ
Advertisement
Advertisement
ನಕ್ಸಲ್ ಬೆಂಬಲಿಗರು ಸರ್ಕಾರದ ಮೇಲೆ ಹಾಗೂ ನಾಗರಿಕ ಸಮಾಜದ ಮೇಲೆ ಪ್ರಭಾವ ಬೀರಲಿದ್ದಾರೆ. ನಕ್ಸಲರು ಶರಣಾದಾಗ ಜನರಿಗೆ ವಿಶ್ವಾಸ ಬರಬೇಕು. ಆದರೆ ಜನರಿಗೆ ವಿಶ್ವಾಸವಿಲ್ಲ. ಶರಣಾಗತಿಯ ಬಗ್ಗೆ ಗೃಹ ಸಚಿವರಿಗೆ ಮಾಹಿತಿಯ ಕೊರತೆಯಿದ್ದ ಹಾಗೆ ಉಲ್ಟಾ-ಪಲ್ಟಾ ಮಾತನಾಡುತ್ತಾರೆ. ಶರಣಾದ ನಕ್ಸಲರು ನಾಗರಿಕ ಸಮಾಜದ ಮೇಲೆ ಪ್ರಭಾವ ಬೀರುವ ಅಪಾಯವಿದೆ ಎಂದು ಹೇಳಿದರು.
Advertisement
ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂದ ಮಾಜಿ ಕ್ರಿಕೆಟಿಗ ಅಶ್ವಿನ್ ಹೇಳಿಕೆ ವಿಚಾರವಾಗಿ, ಹಿಂದಿ ಒಂದು ಅಧಿಕೃತ ಭಾಷೆ, ಪ್ರಧಾನ ಮಂತ್ರಿಯವರು ಎಲ್ಲಾ ಭಾಷೆಯೂ ರಾಷ್ಟ್ರೀಯ ಭಾಷೆ ಅಂತ ಹೇಳಿದ್ದಾರೆ. ನಮ್ಮ ಸರ್ಕಾರದ ಪ್ರಕಾರ ಎಲ್ಲಾ ಭಾಷೆಯು ರಾಷ್ಟ್ರೀಯ ಭಾಷೆ. ಪ್ರಧಾನಿ ಕೂಡ ಕನ್ನಡ ಹಾಗೂ ತಮಿಳುಗೂ ತುಂಬಾ ಮರ್ಯಾದಿ ಕೊಡುತ್ತಾರೆ. ಅಶ್ವಿನ್ ಒಂದು ದೃಷ್ಟಿಕೋನದಲ್ಲಿ ಹೇಳಿದ್ದಾರೆ. ಎಲ್ಲಾ ಭಾಷೆಯು ರಾಷ್ಟ್ರೀಯ ಭಾಷೆ ಆ ಅರ್ಥದಲ್ಲಿ ಅಶ್ವಿನಿ ಹೇಳಿದ್ದಾರೆ ಅಷ್ಟೇ. ಬೇರೆ ಏನು ವಿಚಾರ ಇಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ರಮ್ಯಾಗೆ ಮದುವೆಯ ಆಮಂತ್ರಣ ನೀಡಿದ ಡಾಲಿ
Advertisement