Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ 7 ಕೋಟಿ ಜನರ ಸಮೀಕ್ಷೆ, ಜಾತಿ ತಾರತಮ್ಯ ನಿವಾರಿಸುವುದು ಗಣತಿಯ ಉದ್ದೇಶ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ 7 ಕೋಟಿ ಜನರ ಸಮೀಕ್ಷೆ, ಜಾತಿ ತಾರತಮ್ಯ ನಿವಾರಿಸುವುದು ಗಣತಿಯ ಉದ್ದೇಶ: ಸಿಎಂ

Bengaluru City

ರಾಜ್ಯದ 7 ಕೋಟಿ ಜನರ ಸಮೀಕ್ಷೆ, ಜಾತಿ ತಾರತಮ್ಯ ನಿವಾರಿಸುವುದು ಗಣತಿಯ ಉದ್ದೇಶ: ಸಿಎಂ

Public TV
Last updated: July 23, 2025 9:44 pm
Public TV
Share
3 Min Read
Siddaramaiah 1 7
SHARE

ಬೆಂಗಳೂರು: ರಾಜ್ಯದ 7 ಕೋಟಿ ಜನರ ಸಮೀಕ್ಷೆ ನಡೆಸುವುದು ಹಾಗೂ ಜಾತಿ ತಾರತಮ್ಯ ನಿವಾರಿಸುವುದು ಗಣತಿಯ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಸಿಎಂ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ತಿಳಿಸಿದರು.

Siddaramaiah 16 scaled

ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು:
ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ, ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದರು.

Siddaramaiah 12 scaled

ಸೆ.22ರಿಂದ ಅ.7ರವರೆಗೆ ಸಮೀಕ್ಷೆ:
ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15ದಿನಗಳ ಕಾಲ ಸಮೀಕ್ಷೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ ನೀಡಲಾಗಿದ್ದು, ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು ಎಂದರು.

ದೂರುಗಳಿಗೆ ಆಸ್ಪದವಿಲ್ಲದಂತೆ ಮುನ್ನೆಚ್ಚರಿಕೆ:
ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದರು. ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ಧಪಡಿಸಿ ಭೌತಿಕವಾಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಬಾರಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು ಎಂದು ತೀರ್ಮಾನಿಸಲಾಯಿತು.

Siddaramaiah 7 1 scaled

ಸಮೀಕ್ಷೆ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚನೆಗೆ ತೀರ್ಮಾನ:
ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸಭೆಯಲ್ಲಿ ಸೂಚಿಸಿದರು. ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತೀರ್ಮಾನ ಮಾಡಲಾಯಿತು.

ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು:
ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕೆಂದು ತೀರ್ಮಾನಿಸಲಾಯಿತು.

Siddaramaiah 3 scaled

ಸಮೀಕ್ಷೆಗೆ 1.65 ಲಕ್ಷ ಗಣತಿದಾರರು:
ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಗಳನ್ನು ಸಹ ಬಳಸಿಕೊಳ್ಳಲಾಗುವುದು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದರು.

ಉಪಜಾತಿಗಳನ್ನು ನಿಖರವಾಗಿ ನಮೂದಿಸಲೂ ಸೂಚನೆ:
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು. ಆರ್ಥಿಕ, ಸಾಮಾಜಿಕ ಪರಿಸ್ಥಿತಿಗಳ ಸ್ಥಿತಿಗತಿ ಕುರಿತು ಕರಾರುವಾಕ್ಕಾದ ಸಮೀಕ್ಷೆ ನಡೆಯುವ ಅವಶ್ಯಕತೆ ಇದ್ದು, ಉಪಜಾತಿಗಳನ್ನು ನಿಖರವಾಗಿ ನಮೂದಿಸಬೇಕು ಎಂದು ಸೂಚಿಸಿದರು

Siddaramaiah 4 scaled

ವರ್ಗ ಮತ್ತು ಜಾತಿರಹಿತ ಸಮಾಜದ ನಿರ್ಮಾಣ ಅಗತ್ಯ:
ವರ್ಗ ರಹಿತ, ಜಾತಿರಹಿತ ಸಮಾಜ ನಿರ್ಮಾಣ ಆಗಬೇಕು. ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಸಮಾನತೆಯ ಸಮ ಸಮಾಜ ನಿರ್ಮಾಣ ಆಗಬೇಕು ಎನ್ನುವ ಕಾಳಜಿಯಿಂದ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷೆ ವರದಿ ಆಧರಿಸಿ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರಿಗೆ ಶಕ್ತಿ ತುಂಬುವ ಕೆಲಸ ಆಗಬೇಕು ಎಂದು ತಿಳಿಸಿದರು.

ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

TAGGED:Caste Censuskarnatakasiddaramaiahಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
41 minutes ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
49 minutes ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
57 minutes ago
Priyank Kharge 1
Bengaluru City

ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ

Public TV
By Public TV
1 hour ago
KSRTC
Bagalkot

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ

Public TV
By Public TV
1 hour ago
hassan women
Chikkamagaluru

ಪ್ರಿಯಕರನ ಜೊತೆ ಸಂಸಾರ ಮಾಡಲು ಮಾಸ್ಟರ್ ಪ್ಲ್ಯಾನ್‌ – ಪ್ರಿಯಾಂಕಳ ರಹಸ್ಯ ಭೇದಿಸಿದ ಪೊಲೀಸರು!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?