ಹೊಸ ಸಿನಿಮಾ ಘೋಷಣೆ ಮಾಡಿದ ಸೂರ್ಯ: ಕಾರ್ತಿಕ್ ಸುಬ್ಬರಾಜು ನಿರ್ದೇಶಕ

Public TV
2 Min Read
Surya

ಮಿಳಿನ ಹೆಸರಾಂತ ನಟ ಸೂರ್ಯ, ಇದೀಗ ಮತ್ತೊಂದು ಹೊಸ ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. ಇದು ಇವರ 44ನೇ ಚಿತ್ರವಾಗಿದ್ದು, ಹೆಸರಾಂತ ನಟರ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿರುವ ಸ್ಟಾರ್ ಡೈರೆಕ್ಟರ್ ಕಾರ್ತಿಕ್ ಸುಬ್ಬರಾಜು (Karthik Subbaraju) ಈ ಸಿನಿಮಾದ ನಿರ್ದೇಶಕರು. ಸೂರ್ಯ ಅವರ ಕಂಗುವ ಸಿನಿಮಾ ರಿಲೀಸ್ ಮುನ್ನವೇ ಈ ಹೊಸ ಚಿತ್ರವನ್ನು ಸೂರ್ಯ ಸೋಷಿಯಲ್ ಮೀಡಿಯಾ ಮೂಲಕ ಘೋಷಣೆ ಮಾಡಿದ್ದಾರೆ.

Kanguva 5

ಕಂಗುವ ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಮೊನ್ನೆಯಷ್ಟೇ ‘ಕಂಗುವ’ (Kanguva) ಸಿನಿಮಾದ ಟೀಸರ್ (Teaser) ಬಿಡುಗಡೆ ಆಗಿದ್ದು ಅದ್ಧೂರಿ ತನದ ಮೇಕಿಂಗ್, ಕಲಾವಿದ ಆರ್ಭಟ. ದೃಶ್ಯ ವೈಭವ ಹಾಗೂ ಹಿನ್ನೆಲೆ ಸಂಗೀತದಿಂದಾಗಿ ಟೀಸರ್ ಮತ್ತೊಮ್ಮೆ ನೋಡಬೇಕು ಅನಿಸುತ್ತಿದೆ. ಹೊಡೆದಾಟ, ರಕ್ತದೋಕುಳಿ, ಹೊಸ ಬಗೆಯ ಆಯುಧ, ರಾಕ್ಷಸರು ಹೀಗೆ ನಾನಾ ರೀತಿಯ ದೃಶ್ಯಗಳನ್ನು ಜೋಡಿಸಿಕೊಂಡು ಈ ಟೀಸರ್ ಕಟ್ಟಲಾಗಿದೆ. ಟೀಸರ್ ಕುರಿತಂತೆ ಅಕ್ಷರಗಳಲ್ಲಿ ಓದುವುದಕ್ಕಿಂತ ನೋಡುವುದೇ ಒಂದು ಅನುಭವ.

Kanguva 1

ಇತ್ತೀಚೆಗಷ್ಟೇ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿತ್ತು. ಈ ಪೋಸ್ಟರ್ ನಲ್ಲಿ ಸೂರ್ಯ ಸಖತ್ ಮಿಂಚಿದ್ದರು. ಪೋಸ್ಟರ್ ಕಂಡು ಅಭಿಮಾನಿಗಳು ಫಿದಾ ಆಗಿದ್ದರು.  ಜೊತೆಗೆ ಈ ಸಿನಿಮಾವನ್ನು ಬರೋಬ್ಬರಿ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಜೊತೆಗೆ 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ನೋಡಬಹುದಾಗಿದೆ. ಸಿನಮಾ ಬಿಡುಗಡೆಗೂ ಮುನ್ನವೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ.  ಭಾರೀ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

Kanguva 2

ಮೂಲಗಳ ಪ್ರಕಾರ ಅಮೆಜಾನ್ ಪ್ರೈಮ್ ಸಂಸ್ಥೆಯು ಕಂಗುವ ಸಿನಿಮಾದ ಓಟಿಟಿ (OTT) ಹಕ್ಕನ್ನು ಬರೋಬ್ಬರಿ 80 ಕೋಟಿಗೆ ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ.  ಈ ಮಾಹಿತಿಯನ್ನು ಚಿತ್ರತಂಡವೇ ಬಹಿರಂಗ ಪಡಿಸಿದೆ ಎಂದು ಕೆಲ ಮಾಧ್ಯಮಗಳ ವರದಿ ಮಾಡಿವೆ.

Kanguva 3

ಸ್ಟುಡಿಯೋ ಗ್ರೀನ್ನಡಿ ಕೆ.ಇ. ಜ್ನಾನ ವೇಲ್ ರಾಜ ನಿರ್ಮಿಸಿ, ಶಿವ (Shiva) ನಿರ್ದೇಶಿಸುತ್ತಿರುವ ಈ ಚಿತ್ರವು ಪ್ರಾರಂಭವಾದಾಗಿನಿಂದ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಬಹುಕೋಟಿ ವೆಚ್ಚದ ಈ ಚಿತ್ರದಲ್ಲಿ ಸೂರ್ಯಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ದಿಶಾ ಪಠಾಣಿ (Disha Pathani) ಅಭಿನಯಿಸುತ್ತಿದ್ದು, ಯೋಗಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

 

‘ಕಂಗುವ’ ಚಿತ್ರವು ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಎಲ್ಲ ಭಾಷೆಗಳಿಗೂ ಕನೆಕ್ಟ್ ಆಗುವಂತಹ ಶೀರ್ಷಿಕೆಯೊಂದರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಆ ಶೀರ್ಷಿಕೆ ಕೊನೆಗೂ ಸಿಕ್ಕಿದ್ದು, ‘ಕಂಗುವ’ ಎಂದರೆ, ಬೆಂಕಿಯ ಶಕ್ತಿಯುಳ್ಳವನು ಎಂದರ್ಥ. ಇಲ್ಲಿ ನಾಯಕ ಒಬ್ಬ ಸೂಪರ್ ಹೀರೋ ಆಗಿದ್ದು, ಹಲವು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾನೆ.

Share This Article