ಭಾರತೀಯ ಕೆಳ, ಮಧ್ಯಮ ವರ್ಗದ ಕುಟುಂಬಕ್ಕೂ ವಿಮಾನಯಾನವನ್ನು ಸುಗಮಗೊಳಿಸಿದ, ಅತೀ ಕಡಿಮೆ ದರದಲ್ಲಿ ವಿಮಾನ ಟಿಕೆಟ್ ಸಿಗುವಂತೆ ಮಾಡಿದ ಕ್ಯಾಪ್ಟನ್ ಗೋಪಿನಾಥ್ ಬದುಕಿನ ಸಿನಿಮಾ ತಮಿಳಿನಲ್ಲಿ ಸೂರೈರ್ ಪ್ರೊಟ್ರು ಹೆಸರಿನಲ್ಲಿ ಮೂಡಿ ಬಂದಿತ್ತು. ಬಾಕ್ಸ್ ಆಫೀಸಿನಲ್ಲೂ ಅದು ಸದ್ದು ಮಾಡಿತ್ತು. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬಂದ ಈ ಚಿತ್ರವು ಇದೀಗ ಹಿಂದಿಯಲ್ಲಿ ರಿಮೇಕ್ ಆಗುತ್ತಿದೆ. ಹಿಂದಿ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ನಾಯಕನಾಗಿ ನಟಿಸುತ್ತಿದ್ದಾರೆ.
ತಮಿಳಿನಲ್ಲಿ ಈ ಸಿನಿಮಾ ಬಂದಾಗ ತಮಿಳಿನ ಖ್ಯಾತ ನಟ ಸೂರ್ಯ ಅವರೇ ಈ ಚಿತ್ರವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದ್ದರು. ಈ ಸಿನಿಮಾ ಅದ್ಭುತವಾಗಿ ಮೂಡಿ ಬಂದಿತ್ತು. ನಾಲ್ಕೈದು ಭಾಷೆಗೂ ಡಬ್ ಆಗಿತ್ತು. ಇದೀಗ ಅದೇ ಸಿನಿಮಾವನ್ನು ಹಿಂದಿಯಲ್ಲಿ ಅಕ್ಷಯ್ ಕುಮಾರ್ ಮಾಡುತ್ತಿದ್ದಾರೆ. ಕ್ಯಾಪ್ಟನ್ ಗೋಪಿನಾಥ್ ಅವರ ಪಾತ್ರವನ್ನು ಅಕ್ಷಯ್ ಕುಮಾರ್ ನಿರ್ವಹಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಸೂರ್ಯ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ. ಇದನ್ನೂ ಓದಿ : ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್
ಸೂರೈರ್ ಪೋಟ್ರು ಸಿನಿಮಾವನ್ನು ತಮಿಳಿನಲ್ಲಿ ಮಾಡಿದ್ದ ನಿರ್ದೇಶಕರೇ ಹಿಂದಿಯಲ್ಲೂ ನಿರ್ದೇಶನ ಮಾಡುತ್ತಿದ್ದಾರೆ. ಹೀಗಾಗಿ ಸೂರ್ಯ ಅವರು ಅತಿಥಿ ಪಾತ್ರವನ್ನು ಒಪ್ಪಿಕೊಂಡಿದ್ದಾರಂತೆ. ಮೊದಲು ಇದು ಗಾಸಿಪ್ ಎನ್ನುವಂತೆ ಸುದ್ದಿಯಾಗಿತ್ತು. ಆದರೆ ಇದೀಗ ಸ್ವತಃ ಸೂರ್ಯ ಅವರೇ ಈ ಮಾಹಿತಿಯನ್ನು ಖಚಿತ ಪಡಿಸಿದ್ದಾರೆ. ಅಕ್ಷಯ್ ಕುಮಾರ್ ಜೊತೆಗಿದ್ದ ಫೋಟೋವನ್ನು ಅವರು ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದಾರೆ. ಆದರೆ, ಯಾವ ಪಾತ್ರ ಎನ್ನುವುದನ್ನು ಮಾತ್ರ ಗೌಪ್ಯವಾಗಿ ಇಡಲಾಗಿದೆ.